ಬೆಂಗಳೂರು: 5 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ!
ಐದು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.

ಬೆಂಗಳೂರು: ಐದು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.
ಕೋಗಿಲು ಲೇಔಟ್'ನ 3ನೇ ಕ್ರಾಸ್ ರಸ್ತೆ ನಿವಾಸಿ ಶಕೀಲ್ ಅಕ್ತರ್ ಸೈಫಿ (28) ಹತ್ಯೆಯಾಗಿರುವ ವ್ಯಕ್ತಿಯಾಗಿದ್ದಾರೆ. ಬಿಹಾರ ಮೂಲಕ ಶಕೀಲ್ ಕಳೆದ 10 ವರ್ಷಗಳಿಂದ ನಗರದಲ್ಲಿ ನೆಲೆಯೂರಿದ್ದ. ಈವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯೊಂದರಲ್ಲಿ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದ.
ಈತನ ಶವ ಭಾನುವಾರ ಬೆಳಿಗ್ಗೆ ಮನೆಯ ಸಮೀಪದ ಮಾರ್ಟಿನ್ ಎಂಬುವವರ ನಿವೇಶನದ ಶೌಚಗುಂಡಿಯಲ್ಲಿ ಮೂಟೆ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸಂಪಿಗೆಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಮೃತದೇಹ ಮೇಲಕ್ಕೆ ಎತ್ತಿಸಿ ಪರಿಶೀಲಿಸಿದಾಗ ಅದು ಕಾರ್ಪೆಂಟರ್ ಶಕೀಲ್'ನ ಮೃತದೇಹ ಎಂಬುದು ಗೊತ್ತಾಗಿದೆ.
ಇದನ್ನೂ ಓದಿ: ಬೆಂಗಳೂರು: ಅಪರಿಚಿತ ವ್ಯಕ್ತಿಯ ಶವ ಪತ್ತೆ, ತನಿಖೆ ಆರಂಭ
ಮಂಗಳವಾರ ರಾತ್ರಿಯಿಂದ ಸೈಫಿ ನಾಪತ್ತೆಯಾಗಿದ್ದ. ಈ ಕುರಿತು ಸೈಫಿ ಸಹೋದರ ಗುರುವಾರ ನಾಪತ್ತೆ ದೂರು ದಾಖಲಿಸಿದ್ದರು. ಶೌಚಗುಂಡಿಯಲ್ಲಿ ಪತ್ತೆಯಾದ ಶವ ಸೈಫಿ ಅವರದ್ದೇ ಎಂದು ಸೈಫಿ ಸಹೋದರ ಖಚಿತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲವರ ಮೇಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ 201 (ಅಪರಾಧದ ಸಾಕ್ಷ್ಯಾಧಾರಗಳು ನಾಪತ್ತೆ) ಮತ್ತು 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


