ರಾಜ್ಯ

ಬೆಂಗಳೂರು: ಮತ್ತೊರ್ವ ಗುತ್ತಿಗೆದಾರನ ಅಪಾರ್ಟ್ ಮೆಂಟ್ ಮೇಲೆ ಐಟಿ ದಾಳಿ, 40 ಕೋಟಿ ರೂ. ವಶ

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಆರ್ ಅವರ ನಿವಾಸದಲ್ಲಿ 42 ಕೋಟಿ ರುಪಾಯಿ ಪತ್ತೆಯಾದ ಬೆನ್ನಲ್ಲೇ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳು ಶನಿವಾರ ನಗರದಲ್ಲಿನ ಮತ್ತೋರ್ವ ಗುತ್ತಿಗೆದಾರರ ಅಪಾರ್ಟ್‌ಮೆಂಟ್‌ನಿಂದ 40 ಕೋಟಿ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಮತ್ತೊರ್ವ ಗುತ್ತಿಗೆದಾರನ ಅಪಾರ್ಟ್ ಮೆಂಟ್ ಮೇಲೆ ಐಟಿ ದಾಳಿ, 40 ಕೋಟಿ ರೂ. ವಶ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಆರ್ ಅವರ ನಿವಾಸದಲ್ಲಿ 42 ಕೋಟಿ ರುಪಾಯಿ ಪತ್ತೆಯಾದ ಬೆನ್ನಲ್ಲೇ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳು ಶನಿವಾರ ನಗರದಲ್ಲಿನ ಮತ್ತೋರ್ವ ಗುತ್ತಿಗೆದಾರರ ಅಪಾರ್ಟ್‌ಮೆಂಟ್‌ನಿಂದ 40 ಕೋಟಿ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದಾರೆ. 

ಕಳೆದ ಕೆಲವು ದಿನಗಳಿಂದ ತೆರಿಗೆ ವಂಚನೆಗಾಗಿ ರೀಲರ್‌ಗಳು, ಚಿನ್ನಾಭರಣ ವ್ಯಾಪಾರಿಗಳು ಮತ್ತು ಗುತ್ತಿಗೆದಾರರ ಮೇಲೆ ದಾಳಿ ನಡೆಸುತ್ತಿರುವ ತಂಡ, ರಾಜಾಜಿನಗರದ ಕ್ಯಾತಮಾರನಹಳ್ಳಿಯಲ್ಲಿರುವ ಗುತ್ತಿಗೆದಾರ ಸಂತೋಷ್ ಎಂಬುವವರ ಅಪಾರ್ಟ್‌ಮೆಂಟ್‌ನಲ್ಲಿ ಶೋಧ ಕಾರ್ಯ ನಡೆಸಿದ್ದು, ಟ್ರಂಕ್‌ಗಳು, ಸೂಟ್‌ಕೇಸ್‌ಗಳು ಮತ್ತು ಬ್ಯಾಗ್‌ಗಳಲ್ಲಿ 500 ರೂ.ಗಳ ಕರೆನ್ಸಿಗಳ 40 ಕೋಟಿ ರೂ. ಪತ್ತೆ ಮಾಡಿದ್ದಾರೆ. 

ಹಣದ ಮೂಲದ ಬಗ್ಗೆ ಪ್ರಶ್ನಿಸಿದಾಗ, ಹಣದ ಒಂದು ಭಾಗ ಕಾಂಗ್ರೆಸ್ ಪಕ್ಷದ ಮಾಜಿ ಎಂಎಲ್‌ಸಿಗೆ ಸೇರಿದ್ದು ಎಂದು ಗುತ್ತಿಗೆದಾರರು ಹೇಳಿದ್ದಾರೆ. ಮಾಜಿ ಎಂಎಲ್‌ಸಿಯ ಸಹೋದರನನ್ನು ಅಪಾರ್ಟ್‌ಮೆಂಟ್‌ಗೆ ಕರೆಸಿ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.