ಗದಗ: ಬಸ್–ಟಾಟಾ ಸುಮೋ ಮುಖಾಮುಖಿ ಡಿಕ್ಕಿ; ಮೂವರು ಮಹಿಳೆಯರು ಸೇರಿ ಐವರ ದುರ್ಮರಣ
ಕೆಎಸ್ಆರ್'ಟಿಸಿ ಬಸ್ ಹಾಗೂ ಟಾಟಾ ಸುಮೋ ವಾಹನ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮಹಿಳೆಯರು ಸೇರಿ ಐವರು ದುರ್ಮರಣವನ್ನಪ್ಪಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಿಡಗುಂದಿಕೊಪ್ಪ ಕ್ರಾಸ್ ಬಳಿ ಸೋಮವಾರ ನಡೆದಿದೆ.

ಗದಗ: ಕೆಎಸ್ಆರ್'ಟಿಸಿ ಬಸ್ ಹಾಗೂ ಟಾಟಾ ಸುಮೋ ವಾಹನ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮಹಿಳೆಯರು ಸೇರಿ ಐವರು ದುರ್ಮರಣವನ್ನಪ್ಪಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಿಡಗುಂದಿಕೊಪ್ಪ ಕ್ರಾಸ್ ಬಳಿ ಸೋಮವಾರ ನಡೆದಿದೆ.
ಮೃತರನ್ನು ಮಾದೇನ ಹಿಪ್ಪರಗಿ ನಿವಾಸಿಗಳಾದ ಶಿವಕುಮಾರ ಕಲಶೆಟ್ಟಿ(50), ಚಂದ್ರಕಲಾ ಕಲಶೆಟ್ಟಿ(42), ರಾಣಿ ಕಲಶೆಟ್ಟಿ(32) ಹಾಗೂ ಅಫಜಲಪುರ ನಿವಾಸಿಗಳಾದ ಸಚಿನ್ ಅಬ್ಬಾಸ್ ಕತ್ತಿ (31), ದ್ರಾಕ್ಷಾಯಣಿ ಕತ್ತಿ(33) ಮೃತರು ಎಂದು ಗುರುತಿಸಲಾಗಿದೆ.
ಕಲಬುರಗಿಯಿಂದ ಶಿರಹಟ್ಟಿ ಫಕ್ಕೀರೇಶ್ವರ ಮಠದ ದರ್ಶನಕ್ಕೆ ತೆರಳುತ್ತಿದ್ದ ಟಾಟಾ ಸುಮೋ ವಾಹನದ ಹಿಂಬದಿಯ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋ ವಾಹನದಲ್ಲಿದ್ದ ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನರೇಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


