ಗದಗದಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಸಂಖ್ಯೆ 6ಕ್ಕೆ ಏರಿಕೆ
ಜಿಲ್ಲೆಯ ನರೇಗಲ್ ಹೋಬಳಿ ಬಳಿ ಸೋಮವಾರ ಬೆಳಗ್ಗೆ ಟಾಟಾ ಸುಮೋ–ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಗದಗ: ಜಿಲ್ಲೆಯ ನರೇಗಲ್ ಹೋಬಳಿ ಬಳಿ ಸೋಮವಾರ ಬೆಳಗ್ಗೆ ಟಾಟಾ ಸುಮೋ–ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಸ್ಥಳದಲ್ಲಿಯೇ ಐವರು ದುರ್ಮರಣವನ್ನಪ್ಪಿದ್ದರು. ನಾಲ್ವರು ಮಕ್ಕಳು ಸೇರಿ 10 ಮಂದಿ ಗಾಯಗೊಂಡಿದ್ದರು. ನಾಲ್ವರು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಈ ಪೈಕಿ ದಿಂಗಾಲೇಶ ಕಲಶೆಟ್ಟಿ(5) ಎಂಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇನ್ನೂ ಮೂವರು ಬಾಲಕರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಮೃತನಾದ ದಿಂಗಾಲೇಶ ಕಲಶೆಟ್ಟಿ(5) ಪೋಷಕರಾದ ಶಿವಕುಮಾರ್ ಕಲಶೆಟ್ಟಿ ಮತ್ತು ಚಂದ್ರಕಲಾ ಕಲಶೆಟ್ಟಿ ಇಬ್ಬರೂ ಸೋಮವಾರ ಬೆಳಗಿನ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


