ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿ ಕೊಲೆ; ಇಬ್ಬರು ಆರೋಪಿಗಳ ಬಂಧನ
ಇತ್ತೀಚೆಗಷ್ಟೇ ದೊಡ್ಡ ಬಾಣಸವಾಡಿಯಲ್ಲಿ 35 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ರಾಮಮೂರ್ತಿನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಇತ್ತೀಚೆಗಷ್ಟೇ ದೊಡ್ಡ ಬಾಣಸವಾಡಿಯಲ್ಲಿ 35 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ರಾಮಮೂರ್ತಿನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತರನ್ನು ಚಿಕ್ಕ ಬಾಣಸವಾಡಿ ನಿವಾಸಿಗಳಾದ 28 ವರ್ಷದ ಹೃತಿಕ್ ಕುಮಾರ್ ಮತ್ತು ಸುಮನ್ ಎಂದು ಗುರುತಿಸಲಾಗಿದೆ.
ಒಎಂಬಿಆರ್ ಲೇಔಟ್ ನಿವಾಸಿ ಮದನ್ ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಮದನ್ ಅವರು ಬುಧವಾರ ಸಲೂನ್‌ಗೆ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.
ತನಿಖೆ ವೇಳೆ ಸುಳಿವುಗಳನ್ನು ಆಧರಿಸಿ ಪೊಲೀಸರು ಹೃತಿಕ್ ಕುಮಾರ್ ಹಾಗೂ ಸುಮನ್ ಅವರನ್ನು ಬಂಧಿಸಿದ್ದಾರೆ.
"2019 ರಲ್ಲಿ, ಮದನ್, ಆರೋಪಿ ಹೃತಿಕ್ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದಾಗಿ ಹೃತಿಕ್ ಕೆಲಕಾಲ ಕೋಮಾಕ್ಕೆ ಜಾರಿದ್ದ. ಚಿಕಿತ್ಸೆಗಾಗಿ ಸಾಕಷ್ಟು ಹಣ ಖರ್ಚಾಗಿತ್ತು. ಚೇತರಿಸಿಕೊಂಡಿದ್ದ ಹೃತಿಕ್ ಮದನ್ ಮೇಲೆ ದ್ವೇಷ ಬೆಳೆಸಿಕೊಂಡಿದ್ದ. ಆದರೆ, ಘಟನೆ ಬಳಿಕ ಮದನ್ ಚೆನ್ನೈಗೆ ಸ್ಥಳಾಂತರಗೊಂಡಿದ್ದ. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಮದನ್ ನಗರಕ್ಕೆ ವಾಪಸ್ಸಾಗಿದ್ದ. ಈ ವಿಚಾರ ತಿಳಿದ ಹೃತಿಕ್ ಹಳೆ ದ್ವೇಷ ಮರೆತು ಮತ್ತೆ ಒಂದಾಗೋಣ ಎಂದು ಹೇಳಿ ಮಾತುಕತೆಗಾಗಿ ಅಕ್ಟೋಬರ್ 11ರ ಸಂಜೆ ಕರೆಸಿಕೊಂಡಿದ್ದಾನೆ. ಮಾತುಕತೆ ವೇಳೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿದೆ, ನೋಡ ನೋಡುತ್ತಿದ್ದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


