ಅಕ್ಟೋಬರ್ 26 ರಂದು ಐಐಎಂ ಬೆಂಗಳೂರು ಸುವರ್ಣ ಮಹೋತ್ಸವಕ್ಕೆ ರಾಷ್ಟ್ರಪತಿ ಮುರ್ಮು ಚಾಲನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐಐಎಂ ಬೆಂಗಳೂರು ಸುವರ್ಣ ಮಹೋತ್ಸವ ಪ್ರತಿಷ್ಠಾನ ಸಪ್ತಾಹವನ್ನು ಅಕ್ಟೋಬರ್ 26 ರಂದು ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಂಸ್ಥೆ ಗುರುವಾರ ತಿಳಿಸಿದೆ.

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐಐಎಂ ಬೆಂಗಳೂರು ಸುವರ್ಣ ಮಹೋತ್ಸವ ಪ್ರತಿಷ್ಠಾನ ಸಪ್ತಾಹವನ್ನು ಅಕ್ಟೋಬರ್ 26 ರಂದು ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಂಸ್ಥೆ ಗುರುವಾರ ತಿಳಿಸಿದೆ.
ಸುವರ್ಣ ಮಹೋತ್ಸವದ ಅಂಗವಾಗಿ ಐಐಎಂ ಬೆಂಗಳೂರು ಸರಣಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.
ಮೊದಲ ದಿನ(ಅಕ್ಟೋಬರ್ 26) ಐಐಎಂಬಿ ಆಡಿಟೋರಿಯಂನಲ್ಲಿ ಸಂಜೆ 4 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ಮುರ್ಮು ಅವರು ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ. ನಂತರ ಐಐಎಂಬಿ ಕ್ಯಾಂಪಸ್‌ನಲ್ಲಿ ಪುಸ್ತಕ ಬಿಡುಗಡೆ ಹಾಗೂ ಚಲನಚಿತ್ರ ಪ್ರದರ್ಶನ ನಡೆಯಲಿದೆ.
ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಐಐಎಂ ಬೆಂಗಳೂರು ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಮತ್ತು ಐಐಎಂ ಬೆಂಗಳೂರು ನಿರ್ದೇಶಕ ಪ್ರೊ ರಿಷಿಕೇಶ ಟಿ ಕೃಷ್ಣನ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


