ರಾಜ್ಯ

ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನದಿಂದ ಶರಣಪ್ರಕಾಶ್ ಪಾಟೀಲ್ ವಜಾಗೊಳಿಸಿ; ಬಿಜೆಪಿ ಆಗ್ರಹ

ಶಿರೋಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ, ಸಚಿವ ಸ್ಥಾನದಿಂದ ಶರಣಪ್ರಕಾಶ್ ಪಾಟೀಲ್ ಅವರನ್ನು ವಜಾಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ.

ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನದಿಂದ ಶರಣಪ್ರಕಾಶ್ ಪಾಟೀಲ್ ವಜಾಗೊಳಿಸಿ; ಬಿಜೆಪಿ ಆಗ್ರಹ
ಸಂಗ್ರಹ ಚಿತ್ರ
Published On :

ಕಲಬುರಗಿ: ಶಿರೋಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ, ಸಚಿವ ಸ್ಥಾನದಿಂದ ಶರಣಪ್ರಕಾಶ್ ಪಾಟೀಲ್ ಅವರನ್ನು ವಜಾಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಎಂಎಲ್ಸಿ ಎನ್ ರವಿಕುಮಾರ್ ಅವರು ಮಾತನಾಡಿ, ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ಕಿರುಕುಳವೇ ನನ್ನ ಸಾವಿಗೆ ಕಾರಣ ಎಂದು ಸಾವಿಗೆ ಮುನ್ನ ಆಡಿಯೋದಲ್ಲಿ ಶಿವಕುಮಾರ್ ಹೇಳಿಕೊಂಡಿದ್ದಾರೆ. ಸರ್ಕಾರ ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಮತ್ತು ತನಿಖಾ ವರದಿ ಬರುವವರೆಗೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿಯ ಹಿರಿಯ ಮುಖಂಡ, ಕೇಂದ್ರ ಸಚಿವ ಭಗವಂತ ಖೂಬಾ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಿನಿಂದ ಜನರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ. ಧರ್ಮಕ್ಕಾಗಿ ಕೆಲಸ ಮಾಡುವವರನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. “ಮೃತ ಬಿಜೆಪಿ ಕಾರ್ಯಕರ್ತನನ್ನು ಅವರ ಸಂಬಂಧಿಕರ ಕೃಷಿ ಜಮೀನಿನಲ್ಲಿ ಥಳಿಸಲಾಗಿದೆ. ಶಿವಕುಮಾರ್ ಸಾವಿಗೂ ಮುನ್ನ ಆಡಿಯೋದಲ್ಲಿ ಸಚಿವ ಶರಣ ಪ್ರಕಾಶ್ ಪಾಟೀಲ್ ವಿರುದ್ಧ ಆರೋಪ ಮಾಡಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮೌನವಾಗಿದ್ದಾರೆ ಎಂದು ಕಿಡಿಕಾರಿದರು.

ಶಿವಕುಮಾರ್ ಅವರಿಗೆ ಕಿರುಕುಳ ನೀಡಿ ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದ ಎಲ್ಲರನ್ನೂ ಬಂಧಿಸಬೇಕು. ನೈತಿಕ ಹೊಣೆ ಹೊತ್ತು ಶರಣಪ್ರಕಾಶ್ ಪಾಟೀಲ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.