ನಕಲಿ ವೋಟರ್ ಐಡಿ ಹಗರಣ: ಪೊಲೀಸರಿಂದ ಆರೋಪಿಗಳ ವಿಚಾರಣೆ
ನಕಲಿ ಮತದಾರರ ಗುರುತಿನ ಚೀಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಬೆಂಬಲಿಗ ಮೌನೇಶ್ ಕುಮಾರ್ ಅವರನ್ನು ಹೆಬ್ಬಾಳ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು: ನಕಲಿ ಮತದಾರರ ಗುರುತಿನ ಚೀಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಬೆಂಬಲಿಗ ಮೌನೇಶ್ ಕುಮಾರ್ ಅವರನ್ನು ಹೆಬ್ಬಾಳ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ನಕಲಿ ಆಧಾರ್ ಕಾರ್ಡ್‌ಗಳು, ಮತದಾರರ ಗುರುತಿನ ಚೀಟಿಗಳು, ಡ್ರೈವಿಂಗ್ ಲೈಸೆನ್ಸ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಮುದ್ರಿಸಲಾಗುತ್ತಿದೆ ಎಂಬ ಮಾಹಿತಿ ಕೇಳಿ ಬಂದ ಹಿನ್ನೆಲೆಯಲ್ಲಿ ಆರ್‌ಟಿ ನಗರದ ಕನಕನಗರದ ಸುಲ್ತಾನ್ ಪಾಳ್ಯ ಮುಖ್ಯರಸ್ತೆಯಲ್ಲಿರುವ ಮೌನೇಶ್ ಕುಮಾರ್ ಅವರ ಎಂಎಸ್‌ಎಲ್ ಟೆಕ್ನೋ ಸೊಲ್ಯೂಷನ್ಸ್ ಕಚೇರಿಯ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದರು.
ಪ್ರಕರಣ ಸಂಬಂಧ ಮೌನೇಶ್ ಹಾಗೂ ಆತನ ಸಹಚರರಾದ ಭಗತ್ ಹಾಗೂ ರಾಘವೇಂದ್ರ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯಾಗಿರುವ ಮೌನೇಶ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಸಚಿವ ಭೈರತ್ ಸುರೇಶ್ ಅವರೊಂದಿಗಿರುವ ಫೋಟೋಗಳನ್ನು ಹಾಕಿಕೊಂಡಿದ್ದು, ಹೀಗಾಗಿ ಭೈರತಿ ಸುರೇಶ್ ಅವರ ಆಪ್ತನೆಂದು ಹಲವುರು ಟೀಕಿಸುತ್ತಿದ್ದಾರೆ. ಬಿಜೆಪಿ ಕೂಡ ವಾಗ್ದಾಳಿ ನಡೆಸಿದೆ.
ಆರೋಪಿಗಳನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು, ಶನಿವಾರ ವಿಚಾರಣೆಗೊಳಸಪಡಿಸಿದರು. ಈ ವೇಳೆ ಆರೋಪಿಗಳಿಂಗ ಕಂಪ್ಯೂಟರ್, ಲ್ಯಾಪ್ ಟಾಪ್, ಫೋನ್ ಗಳನ್ನು ವಶಪಡಿಸಿಕೊಂಡಿದ್ದು, ಮೌನೇಶ್ ಅವರಿಗೆ ನೋಟಿಸ್ ಜಾರಿ ಮಾಡಿ, ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


