ರಾಯಚೂರು: ಲಿಂಗಸುಗೂರು ತಾಲೂಕಿನ 4 ಗ್ರಾಮಗಳಲ್ಲಿ ಲಘು ಭೂಕಂಪ; ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲು!
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ನಸುಕಿನ ಜಾವ 2.50ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ.

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ನಸುಕಿನ ಜಾವ 2.50ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ.
ಈ ಘಟನೆ ವಿಜಯದಶಮಿ ಹಬ್ಬದ ಸಂಭ್ರಮದಲ್ಲಿದ್ದ ಜನರಲ್ಲಿ ಆತಂಕ ಮೂಡಿಸಿದೆ. ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ಹಟ್ಟಿ ಗ್ರಾಮದ 2.6 ಕಿಮೀ ಸುತ್ತಲಿನ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ, ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಈ ರೀತಿಯ ಲಘು ಭೂಕಂಪನದಿಂದ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


