ರಾಜ್ಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೂ ಹುಲಿ ಉಗುರು ಸಂಕಷ್ಟ: ಪೆಂಡೆಂಟ್ ಇರುವ ಮೃಣಾಲ್ ಫೋಟೋ ವೈರಲ್

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್​ಗೂ ಸಂಕಷ್ಟ ಶುರುವಾಗಿದೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೂ ಹುಲಿ ಉಗುರು ಸಂಕಷ್ಟ: ಪೆಂಡೆಂಟ್ ಇರುವ ಮೃಣಾಲ್ ಫೋಟೋ ವೈರಲ್
ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಫೋಟೋ ವೈರಲ್
Published On :

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಕೊರಳಲ್ಲಿ ಹುಲಿ ಉಗುರಿನ  ಲಾಕೆಟ್ ಪತ್ತೆಯಾದ ಕೇಸ್ ಬೆನ್ನಲ್ಲೇ ರಾಜ್ಯಾದ್ಯಂತ ಬೇಟೆ ಜೋರಾಗಿದೆ. ಹುಲಿ ಉಗುರಿನ ಪೆಂಡೆಂಟ್ ಧರಿಸಿ ಬಿಲ್ಡಪ್ ಕೊಡುತ್ತಿದ್ದವರಿಗೆ ಅರಣ್ಯ ಇಲಾಖೆ ಶಾಕ್ ಕೊಟ್ಟಿದೆ.

ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್​ಗೂ ಸಂಕಷ್ಟ ಶುರುವಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಹಳೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 2020 ರಲ್ಲಿ ಹೆಬ್ಬಾಳ್ಕರ್ ಅವರ ಸಹೋದರಿಯ ಮಗಳ ವಿವಾಹ ಸಮಾರಂಭದಲ್ಲಿ ತೆಗೆದ ಫೋಟೋವನ್ನು ಸಚಿವರು ತಮ್ಮ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡಿದ್ದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಶೇಖರ್ ಕಲ್ಲೋಳ್ಕರ್ ಮಾತನಾಡಿ, 'ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಅವರ ವೈರಲ್ ಚಿತ್ರ ನನ್ನ ಕಣ್ಣಿಗೆ ಬಿದ್ದಿದೆ. ನೋಟಿಸ್ ನೀಡಲಾಗುತ್ತಿದ್ದು, ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಪೆಂಡೆಂಟ್ ಸಂಗ್ರಹಿಸಲಿದ್ದಾರೆ.

ಅದು ಅಸಲಿಯೋ ಅಥವಾ ನಕಲಿಯೋ ಎಂಬುದನ್ನು ದೃಢಪಡಿಸಲು ಪರೀಕ್ಷೆಗೆ ಕಳುಹಿಸಲಾಗುವುದು ಎಂದಿದ್ದಾರೆ. ಮೃಣಾಲ್ ಯುವ ಕಾಂಗ್ರೆಸ್ ನಾಯಕರಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.