ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ರಾಜ್ಯದಲ್ಲಿ ಮತ್ತೆ ಮಳೆ ಬರುವ ವಾತಾವರಣ ನಿರ್ಮಾಣವಾಗಿದ್ದು, ಇಂದಿನಿಂದ 5 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಬರುವ ವಾತಾವರಣ ನಿರ್ಮಾಣವಾಗಿದ್ದು, ಇಂದಿನಿಂದ 5 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೋಮವಾರದಿಂದ ಐದು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


