Physical Abuse in Mall; ಬೆಂಗಳೂರು ಮಾಲ್ನಲ್ಲಿ ಯುವತಿಗೆ ಡಿಕ್ಕಿ ಹೊಡೆದು ಅಶ್ಲೀಲವಾಗಿ ವರ್ತಿಸಿದ ವ್ಯಕ್ತಿ; ವಿಡಿಯೋ ವೈರಲ್
ಬೆಂಗಳೂರಿನ ಪ್ರತಿಷ್ಠಿತ ಮಾಲ್ ವೊಂದರಲ್ಲಿ ವಯಸ್ಸಾದ ವ್ಯಕ್ತಿಯೊಬ್ಬರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮಾಲ್ ವೊಂದರಲ್ಲಿ ವಯಸ್ಸಾದ ವ್ಯಕ್ತಿಯೊಬ್ಬರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಬೆಂಗಳೂರಿನ ಲುಲು ಮಾಲ್ (Lulu Mall)ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, bengaluruindiablr ಎಂಬ ಇನ್ ಸ್ಟಾಗ್ರಾಮ್ ಖಾತೆದಾರರು ಈ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ಮಾಲ್ನಲ್ಲಿ ಯುವತಿಯೊಬ್ಬಳು ನಡೆದು ಬರುವಾಗ ವ್ಯಕ್ತಿಯೊಬ್ಬ ಬೇಕಂತಲೇ ಹಿಂದಿನಿಂದ ಹೋಗಿ ಆಕೆಯ ಹಿಂಭಾಗಕ್ಕೆ ಡಿಕ್ಕಿ ಹೊಡೆದು, ಆಕೆಯನ್ನು ಅಶ್ಲೀಲ (sexual abuse)ವಾಗಿ ಮುಟ್ಟಿದ್ದಾನೆ. ಬಳಿಕ ತನಗೇನೂ ತಿಳಿದಿಲ್ಲ ಎಂಬಂತೆ ಆಲ್ಲಿಂದ ಪರಾರಿಯಾಗಿದ್ದಾನೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೊ ವೈರಲ್ ಆಗುತ್ತಿದೆ.
ನಗರದ ಲುಲು ಮಾಲ್ನಲ್ಲಿ ಭಾನುವಾರ ಅಂದರೆ ಅ. 29ರ ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ. ವಿಡಿಯೊದಲ್ಲಿ ಕಾಣುತ್ತಿರುವ ಈ ವ್ಯಕ್ತಿ ಮಾಲ್ಗೆ ಬಂದ ಮಹಿಳೆಯರು ಮತ್ತು ಹುಡುಗಿಯರ ಹಿಂದೆ ಓಡಾಡುತ್ತಿದ್ದ. ಮೊದಲಿಗೆ ಅವನು ಜನನಿಬಿಡ ಪ್ರದೇಶದಲ್ಲಿ ಇದ್ದುದನ್ನು ನೋಡಿದ ನಾನು ಅನುಮಾನಗೊಂಡು ವಿಡಿಯೊ ರೆಕಾರ್ಡ್ ಮಾಡುತ್ತಾ ಹಿಂಬಾಲಿಸಿದೆ. ಈ ವೇಳೆ ಹುಡುಗಿಯೊಬ್ಬಳ ಹಿಂಭಾಗ ಮುಟ್ಟುವುದು ಮಾಡುತ್ತಿದ್ದ.
ಕೂಡಲೇ ಈ ಬಗ್ಗೆ ಸೆಕ್ಯುರಿಟಿಗೆ ಹೋಗಿ ದೂರು ನೀಡಿದ್ದು, ಆತನನ್ನು ಹುಡುಕಿಕೊಂಡು ಬಂದಾಗ ತಪ್ಪಿಸಿಕೊಂಡಿದ್ದ. ಸದ್ಯ ಮಾಲ್ ಆಡಳಿತ ಮಂಡಳಿ ಮತ್ತು ಸೆಕ್ಯೂರಿಟಿಗೆ ಮಾಹಿತಿ ನೀಡಿದ್ದು, ಆ ವ್ಯಕ್ತಿಯನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಆತ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


