ರಾಜ್ಯ

ಕೊಪ್ಪಳದಲ್ಲಿ ಭೀಕರ ಅಪಘಾತ; ದಕ್ಷಿಣ ಭಾರತ ಪ್ರವಾಸ ಕೈಗೊಂಡಿದ್ದ ಫ್ರಾನ್ಸ್ ಪ್ರಜೆ ಸಾವು

ಕೊಪ್ಪಳ ನಗರದ ಹೊರವಲಯದಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಭಾರತ ಪ್ರವಾಸ ಕೈಗೊಂಡಿದ್ದ ಫ್ರಾನ್ಸ್ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ.

ಕೊಪ್ಪಳದಲ್ಲಿ ಭೀಕರ ಅಪಘಾತ; ದಕ್ಷಿಣ ಭಾರತ ಪ್ರವಾಸ ಕೈಗೊಂಡಿದ್ದ ಫ್ರಾನ್ಸ್ ಪ್ರಜೆ ಸಾವು
ಸಾಂದರ್ಭಿಕ ಚಿತ್ರ
Published On :

ಕೊಪ್ಪಳ: ಕೊಪ್ಪಳ ನಗರದ ಹೊರವಲಯದಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಭಾರತ ಪ್ರವಾಸ ಕೈಗೊಂಡಿದ್ದ ಫ್ರಾನ್ಸ್ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಮೊನ್ಸಾಲಿಯರ್ ಮೈಕೆಲ್(63) ಎಂದು ಗುರುತಿಸಲಾಗಿದೆ. ಐದು ಸದಸ್ಯರನ್ನು ಒಳಗೊಂಡ ಫ್ರಾನ್ಸ್ ನ ಸ್ನೇಹಿತರ ತಂಡ ಅಕ್ಟೋಬರ್ 24 ರಂದು ಚೆನ್ನೈ ಮೂಲಕ ಭಾರತಕ್ಕೆ ಆಗಮಿಸಿದ್ದು, ದೇಶದ ಪ್ರವಾಸಿ ತಾಣಗಳನ್ನು ನೋಡಲು ಚೆನ್ನೈನಲ್ಲಿ ಬೈಕ್ ಗಳನ್ನು ಬಾಡಿಗೆಗೆ ಪಡೆದುಕೊಂಡು ಹಂಪಿಗೆ ಬಂದಿದ್ದರು. ಇಲ್ಲಿಂದ ಗೋವಾಗೆ ತೆರಳುವಾಗ ಈ ಅಪಘಾತ ಸಂಭವಿಸಿದೆ ಎಂದು ಕೊಪ್ಪಳ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೈಕೆಲ್ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದಾರೆ. 

ಸ್ಥಳೀಯ ಆಡಳಿತ, ನವದೆಹಲಿಯಲ್ಲಿರುವ ಫ್ರೆಂಚ್ ರಾಯಭಾರ ಕಚೇರಿಗೆ ಘಟನೆಯ ಕುರಿತು ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರ ಅವರ ಕುಟುಂಬ ಸದಸ್ಯರು ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿದೆ. 

ಈ ಸಂಬಂಧ ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.