ಬರಪೀಡಿತ ತಾಲ್ಲೂಕ್ ಘೋಷಣೆ, ನಾಳೆ ಸಚಿವ ಸಂಪುಟ ಉಪ ಸಮಿತಿ ಸಭೆ- ಕೃಷ್ಣ ಬೈರೇಗೌಡ
ಬರ ಪೀಡಿತ ತಾಲ್ಲೂಕ್ ಘೋಷಣೆ ಸಂಬಂಧ ನಾಳೆ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಲಿದ್ದು, ಕೇಂದ್ರ ಸರ್ಕಾರದ ಮಾನದಂಡದ ಅನ್ವಯ ಬರಪೀಡಿತ ತಾಲ್ಲೂಕು ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಕೋಲಾರ: ಬರ ಪೀಡಿತ ತಾಲ್ಲೂಕ್ ಘೋಷಣೆ ಸಂಬಂಧ ನಾಳೆ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಲಿದ್ದು, ಕೇಂದ್ರ ಸರ್ಕಾರದ ಮಾನದಂಡದ ಅನ್ವಯ ಬರಪೀಡಿತ ತಾಲ್ಲೂಕು ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 18 ರಂದು ಸುಮಾರು 113 ತಾಲ್ಲೂಕುಗಳನ್ನು ತಾತ್ಕಾಲಿಕ ಬರಪೀಡಿತ ಎಂದು ಪಟ್ಟಿ ಮಾಡಿಕೊಂಡಿದ್ದೇವೆ. ಆಗಸ್ಟ್ 31 ರಂದು ಸುಮಾರು 75 ತಾಲ್ಲೂಕು ಗಳ ಪಟ್ಟಿ ಸಿದ್ದ ಮಾಡಿದ್ದೇವೆ. ಯಾವ ತಾಲ್ಲೂಕು ಅರ್ಹವಾಗುತ್ತವೆ ಎಂಬುದನ್ನು ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು, ಅವಶ್ಯವಿದ್ದರೆ ಸಚಿವ ಸಂಪುಟದ ಗಮನಕ್ಕೂ ತರಲಾಗುವುದು ಎಂದರು.
ಆಯಾಯ ತಾಲ್ಲೂಕು ಬೆಳೆ ಸಮೀಕ್ಷೆ ನಡೆಸಿ ಅದರ ಆಧಾರದ ಮೇಲೆ ನಾಳೆ ಬರಪೀಡಿತ ತಾಲ್ಲೂಕುಗಳ ಮೊದಲ ಪಟ್ಟಿ ಘೋಷಿಸಲಾಗುವುದು, ಮುಂದಿನ ಒಂದು ವಾರ ಅಥವಾ 10 ದಿನಗಳಲ್ಲಿ ಎರಡನೇ ಪಟ್ಟಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು. ಮಳೆ ಪರಿಸ್ಥಿತಿ ಆಧಾರದ ಮೂರನೇ ಪಟ್ಟಿ ಸಿದ್ಧಪಡಿಸಲೂ ಸರ್ಕಾರ ಚಿಂತನೆ ನಡೆಸಿದೆ.ಮೊದಲ ಹಾಗೂ ಎರಡನೇ ಪಟ್ಟಿಯಲ್ಲಿ ಬಿಟ್ಟುಹೋದ ತಾಲ್ಲೂಕುಗಳನ್ನು ಮೂರನೇ ಪಟ್ಟಿಯಲ್ಲಿ ಪರಿಗಣಿಸಲಾಗುವುದು ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


