ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ: ಪ್ರಿಯಾಂಕ್ ಖರ್ಗೆ
ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರು: ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂಬ ತಮಿಳುನಾಡು ಸಚಿವ ಉದಯನಿದಿ ಸ್ಟಾಲಿನ್ ಅವರ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ನನ್ನ ಪ್ರಕಾರ, ಸಮಾನ ಹಕ್ಕುಗಳನ್ನು ನೀಡದ ಅಥವಾ ನಿಮ್ಮನ್ನು ಮನುಷ್ಯರಂತೆ ನಡೆಸಿಕೊಳ್ಳದ ಯಾವುದೇ ಧರ್ಮ ಕಾಯಿಲೆಯಷ್ಟೇ ಕೆಟ್ಟದು ಎಂದರು. ಈ ಮೂಲಕ ಉದಯ್ ಸ್ಟಾಲಿನ್ ಅವರ ಹೇಳಿಕೆಯನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡರು.
ಉದಯನಿಧಿ ಸ್ಟಾಲಿನ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಉದಯನಿಧಿ ವಿರುದ್ಧ ತಿರುಗಿಬಿದಿದ್ದರೆ, ಕೆಲ ವಿರೋಧ ಪಕ್ಷಗಳ ನಾಯಕರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರು ಮೌನ ವಹಿಸಿದ್ದಾರೆ.
ಇದೇ ವೇಳೆ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಸಚಿವರು, INDIA ಮೈತ್ರಿಕೂಟದಿಂದ ಗಮನ ಬೇರೆಡೆ ಸೆಳೆಯುವ ತಂತ್ರವಾಗಿದೆ. ಬಿಜೆಪಿಯವರು ಭಯಗೊಂಡಿದ್ದಾರೆ. ಕೋವಿಡ್ ಸಾಂಕ್ರಾಮಿಕ, ಮಣಿಪುರ ಅಥವಾ ಚೈನಾ ಒಳನುಸುಳಿದಾಗ ವಿಶೇಷ ಸಂಸತ್ ಅಧಿವೇಶನವನ್ನು ಅವರು ಕರೆಯಲಿಲ್ಲ. ಒಂದು ರಾಷ್ಟ್ರ, ಒಂದು ಚುನಾವಣೆಗಾಗಿ ಐದು ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ. ಲೋಕಸಭಾ ಸಂಶೋಧನಾ ವಿಭಾಗವು ಸೂಚಿಸಿದ ಸಾಧಕ-ಬಾಧಕಗಳನ್ನು ನೋಡುವಂತೆ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರ್ಕಾರದ ಬಳಿ ಮನವಿ ಮಾಡುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


