ರಾಜ್ಯ

ಕಾವೇರಿ ವಿವಾದ: ಮಂಡ್ಯದಲ್ಲಿ ಮುಂದುವರೆದ ಪ್ರತಿಭಟನೆ, ನದಿಗಿಳಿದು ಕನ್ನಡ ಸಂಘಟನೆಗಳಿಂದ ಸರ್ಕಾರದ ವಿರುದ್ಧ ಆಕ್ರೋಶ

ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸೋಮವಾರ ಮತ್ತಷ್ಟು ತೀವ್ರಗೊಂಡಿದೆ.

ಕಾವೇರಿ ವಿವಾದ: ಮಂಡ್ಯದಲ್ಲಿ ಮುಂದುವರೆದ ಪ್ರತಿಭಟನೆ, ನದಿಗಿಳಿದು ಕನ್ನಡ ಸಂಘಟನೆಗಳಿಂದ ಸರ್ಕಾರದ ವಿರುದ್ಧ ಆಕ್ರೋಶ
ಕಾವೇರಿ ನದಿ ನೀರಿಗಿಳಿದು ಪ್ರತಿಭಟಿಸುತ್ತಿರುವ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು.
Published On :

ಮೈಸೂರು: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸೋಮವಾರ ಮತ್ತಷ್ಟು ತೀವ್ರಗೊಂಡಿದೆ.
 
ರೈತರ ಪ್ರತಿಭಟನೆಯೊಂದಿಗೆ ರಾಜ್ಯದ ಕನ್ನಡಪರ ಸಂಘಟನೆಗಳು ಕೈಜೋಡಿಸಿದ್ದು, ಶ್ರೀರಂಗಪಟ್ಟಣದ ಹನುಮಂತನಗರದಲ್ಲಿ ವಿನೂತನ ರೀತಿಯಲ್ಲಿ ನಡೆಸಿದ್ದಾರೆ. ಮಿನರಲ್ ವಾಟರ್‌ನಲ್ಲಿ ಭತ್ತದ ಪೈರು ನಾಟಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಅಲ್ಲದೆ, ಕೆಲ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಾವೇರಿ ನದಿಗಿಳಿದು, ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಈ ನಡುವೆ ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಕನ್ನಡ ಪರ ಸಂಘಟನೆಯ ಕೆಲ ಕಾರ್ಯಕರ್ತರು ಕಾವೇರಿ ಮಾತೆಗೆ ಅಭಿಷೇಖ  ಮಾಡಿ, ಪೂಜೆ ಸಲ್ಲಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.