ಚಿಕ್ಕಮಗಳೂರು: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು, ಮತ್ತೊಬ್ಬರಿಗೆ ಗಾಯ
ಬುಧವಾರ ಚಿಕ್ಕಮಗಳೂರು ನಗರದ ಹೊರವಲಯದ ಕಾನ್ಯೆ ಕ್ರಾಸ್ ಬಳಿ ತಾವು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಮಗಳೂರು: ಬುಧವಾರ ನಗರದ ಹೊರವಲಯದ ಕಾನ್ಯೆ ಕ್ರಾಸ್ ಬಳಿ ತಾವು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ವಿಜಯಪುರ ಲೇಔಟ್ ನಿವಾಸಿಗಳಾದ ನಿರಂಜನ್ (42) ಮತ್ತು ಚೆನ್ನಮ್ಮ (67) ಎಂದು ಗುರುತಿಸಲಾಗಿದೆ. ಮತ್ತೋರ್ವ ಮಹಿಳೆ ರತ್ನಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಮಗಳೂರು ಕಡೆಯಿಂದ ಕಡೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


