ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ರಾಜ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಜಲಾಶಯಗಳಲ್ಲಿ ನೀರಿನ ಸಂಗ್ರಹವಿಲ್ಲ. ಹೀಗಾಗಿ ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ರಾಜ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಕಲಬುರಗಿ: ಜಲಾಶಯಗಳಲ್ಲಿ ನೀರಿನ ಸಂಗ್ರಹವಿಲ್ಲ. ಹೀಗಾಗಿ ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ರಾಜ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಆದೇಶಗಳನ್ನು ಕರ್ನಾಟಕ ಏಕೆ ಜಾರಿಗೊಳಿಸಲು ಸಾಧ್ಯವಾಗಲಿಲ್ಲ ಎಂಬುದಕ್ಕೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತಿದ್ದೇವೆ. ತಮಿಳುನಾಡಿಗೆ ನೀರು ಬಿಡಬೇಕಾದರೆ ಕರ್ನಾಟಕಕ್ಕೆ ಕಾವೇರಿ ನದಿಯಲ್ಲಿ 106 ಟಿಎಂಸಿ ಅಡಿ ನೀರು ಬೇಕು. ಕರ್ನಾಟಕಕ್ಕೆ ಕುಡಿಯುವ ನೀರಿನ ಉದ್ದೇಶಕ್ಕಾಗಿ 30 ಟಿಎಂಸಿ, ಬೆಳೆದ ಬೆಳೆಗಳನ್ನು ಉಳಿಸಲು 70 ಟಿಎಂಸಿ ಮತ್ತು ಕೈಗಾರಿಕೆಗಳಿಗೆ 3 ಟಿಎಂಸಿ ನೀರಿನ ಅಗತ್ಯವಿದೆ. ಆದರೆ, ಇಂದಿನವರೆಗೆ ನಮ್ಮ ಬಳಿ 53 ಟಿಎಂಸಿ ಅಡಿಯಷ್ಟು ನೀರು ಮಾತ್ರ ಇದೆ ಎಂದು ಹೇಳಿದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ಯಡಿಯೂರಪ್ಪ ಅವರದ್ದು ರಾಜಕೀಯ ಪ್ರೇರಿತ ಹೇಳಿಕೆ ಎಂದು ಕಿಡಿಕಾರಿದರು.
ಯಡಿಯೂರಪ್ಪ ಸೇರಿದಂತೆ ಹಿಂದಿನ ಎಲ್ಲ ಸರ್ಕಾರಗಳು ಅಧಿಕಾರದಲ್ಲಿದ್ದಾಗ ನೆರೆಯ ರಾಜ್ಯಕ್ಕೆ ನೀರು ಬಿಟ್ಟಿವೆ. ಸಾಮಾನ್ಯ ವರ್ಷದಲ್ಲಿ ಕರ್ನಾಟಕ 177.25 ಟಿಎಂಸಿ ಅಡಿ ನೀರು ಬಿಡುತ್ತಿತ್ತು. ಇಲ್ಲಿಯವರೆಗೆ 37.7 ಟಿಎಂಸಿ ಅಡಿ ಬಿಡುಗಡೆ ಮಾಡಿದ್ದೇವೆ. ತಮಿಳುನಾಡಿಗೆ 99 ಟಿಎಂಸಿ ಅಡಿ ಎಲ್ಲಿ ಬಿಡುಗಡೆ ಮಾಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಲಿ. ತಮಿಳುನಾಡಿಗೆ 500 ಕ್ಯೂಸೆಸ್ ನೀರು ಬಿಡುವಂತೆ ಸಿಡಬ್ಲ್ಯುಎಂಎ ಸೂಚಿಸಿದೆ. ಆದರೆ. ನಮ್ಮಲ್ಲಿ ನೀರಿನ ಸಂಗ್ರಹಣೆ ಇಲ್ಲದ ಕಾರಣ ನಾವು ನೀರನ್ನು ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


