ಕೆ.ಆರ್.ಪುರ-ಬೈಯಪ್ಪನಹಳ್ಳಿ ಮೆಟ್ರೊ ಮಾರ್ಗ ಪರಿಶೀಲನೆ: ಇಂದು ಈ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ; ಇಲ್ಲಿದೆ ಮಾಹಿತಿ...
ನಮ್ಮ ಮೆಟ್ರೊದ ಕೆ.ಆರ್.ಪುರ-ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸುರಕ್ಷತಾ ಆಯುಕ್ತರು ಇಂದು ಗುರುವಾರ ಸುರಕ್ಷತಾ ತಪಾಸಣೆ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದು ಇಡೀ ದಿನ ಕೃಷ್ಣರಾಜಪುರ ಮತ್ತು ಗರುಡಾಚಾರ್ ಪಾಳ್ಯದವರೆಗಿನ ಮೆಟ್ರೋ ರೈಲ್ವೆ ಸಂಚಾರವನ್ನು ಬಿಎಂಆರ್ಸಿಎಲ್ ಸ್ಥಗಿತಗೊಳಿಸಿದೆ.

ಬೆಂಗಳೂರು: ನಮ್ಮ ಮೆಟ್ರೊದ ಕೆ.ಆರ್.ಪುರ-ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸುರಕ್ಷತಾ ಆಯುಕ್ತರು ಇಂದು ಗುರುವಾರ ಸುರಕ್ಷತಾ ತಪಾಸಣೆ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದು ಇಡೀ ದಿನ ಕೃಷ್ಣರಾಜಪುರ ಮತ್ತು ಗರುಡಾಚಾರ್ ಪಾಳ್ಯದವರೆಗಿನ ಮೆಟ್ರೋ ರೈಲ್ವೆ ಸಂಚಾರವನ್ನು ಬಿಎಂಆರ್ಸಿಎಲ್ ಸ್ಥಗಿತಗೊಳಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ, ಕೃಷ್ಣರಾಜಪುರ ಮತ್ತು ಗರುಡಾಚಾರ್ಪಾಳ್ಯದವರೆಗೆ ಇಡೀ ದಿನ ಮೆಟ್ರೋ ರೈಲು ಸಂಚಾರ ಸೇವೆ ಇರುವುದಿಲ್ಲ. ಬೈಯ್ಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30ರಿಂದ 4.30ರವರೆಗೆ ರೈಲು ಸಂಚರಿಸುವುದಿಲ್ಲ ಎಂದು ತಿಳಿಸಿದೆ.
ಇನ್ನು ವೈಟ್ಫೀಲ್ಡ್ ಮತ್ತು ಗರುಡಾಚಾರಪಾಳ್ಯ ನಡುವೆ ರೈಲು ಸೇವೆ ಎಂದಿನಂತೆ ಇರಲಿದೆ. ಇಂದಿರಾನಗರ ಮತ್ತು ಕೆಂಗೇರಿ ನಡುವೆ ಮಧ್ಯಾಹ್ನ 1.30ರಿಂದ 4.30ರವರೆಗೆ ರೈಲ್ವೆ ಸೇವೆ ಲಭ್ಯವಿದೆ. ಮಧ್ಯಾಹ್ನ 1.30ರವರೆಗೆ ಮತ್ತು ಸಂಜೆ 4.30ರ ಬಳಿಕ ಬೈಯ್ಯಪ್ಪನಹಳ್ಳಿ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣದ ನಡುವೆ ರಾತ್ರಿ 11ರವರೆ ಮೆಟ್ರೋ ಸೇವೆ ಎಂದಿನಂತೆ ನಡೆಯಲಿದೆ. ಮೆಟ್ರೋ ಪ್ರಯಾಣಿಕರು ರೈಲ್ವೆ ಸಂಚಾರದ ವ್ಯತ್ಯಯ ಗಮನಿಸಿ ಸಹಕರಿಸುವಂತೆ ಬಿಎಂಆರ್ಸಿಎಲ್ ಕೋರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


