ರಾಜ್ಯ

ಸರ್ವಜನಾಂಗದ ಶಾಂತಿಯ ತೋಟ ಈಗ ಕುಡುಕರ ತೋಟ: ಮನೆಮನೆಗೂ 'ಮದ್ಯಭಾಗ್ಯ' ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ

ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು. ಕಾರಣವಿಷ್ಟೇ, ಕಾಂಗ್ರೆಸ್ ಸರಕಾರ 'ಕರ್ನಾಟಕವನ್ನು ಕುಡುಕರ ತೋಟ'ವನ್ನಾಗಿ ಮಾಡಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಸರ್ವಜನಾಂಗದ ಶಾಂತಿಯ ತೋಟ ಈಗ ಕುಡುಕರ ತೋಟ: ಮನೆಮನೆಗೂ 'ಮದ್ಯಭಾಗ್ಯ' ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ
ಎಚ್.ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು. ಕಾರಣವಿಷ್ಟೇ, ಕಾಂಗ್ರೆಸ್ ಸರಕಾರ 'ಕರ್ನಾಟಕವನ್ನು ಕುಡುಕರ ತೋಟ'ವನ್ನಾಗಿ ಮಾಡಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಚುನಾವಣೆಗೆ ಮುನ್ನ 'ಸರ್ವಜನಾಂಗದ ಶಾಂತಿಯ ತೋಟ' ಎನ್ನುತ್ತಿದ್ದರು, ಗೆದ್ದ ನಂತರ 'ಕರ್ನಾಟಕ ಕುಡುಕರ ತೋಟ' ಎನ್ನುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಸಂಕಲ್ಪ ಎಂದು ಹೇಳಿದ್ದಾರೆ.

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದ್ಹೇಳಿ, ಈಗ ಮನೆಮನೆಗೂ 'ಮದ್ಯಭಾಗ್ಯ' ನೀಡಲು ಹೊರಟಿದೆ. ಸರಕಾರವು ಧನಪಿಶಾಚಿ ಅವತಾರವೆತ್ತಿ ಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ.

ಖೊಟ್ಟಿ ಗ್ಯಾರಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು. ಅಕ್ಕಿ, ಬೇಳೆ, ದವಸಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದ?

3,000 ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ ತೆಗೆದು ಮನೆಹಾಳು ಮಾಡಲಿದೆ ಸರಕಾರ. ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ. ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರಕಾರ.

ನಾರಿಯರಿಗೆ 'ಶಕ್ತಿ' ತುಂಬುತ್ತೇವೆ ಎಂದ ಸರಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. 'ಗೃಹಲಕ್ಷ್ಮೀ' ಎಂದ ಸರಕಾರ ಅವರ ಬಾಳಿಗೆ ಗ್ರಹಣವಾಗಿದೆ. 'ಗೃಹಜ್ಯೋತಿ' ಎಂದ ಸರಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. 'ಅನ್ನಭಾಗ್ಯ' ಎಂದ ಸರಕಾರ, ಈಗ 'ಮದ್ಯಭಾಗ್ಯ' ಎನ್ನುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.