ಪಿಎಸ್ಐ ನೇಮಕಾತಿ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪಾಲ್ಗೆ ಷರತ್ತು ಬದ್ದ ಜಾಮೀನು
ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ರೂ. ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸುವಂತೆ ಕೋರ್ಟ್ ಸೂಚಿಸಿದೆ. ಬಂಧನವಾಗಿ ಒಂದು ವರ್ಷ ಎರಡು ತಿಂಗಳ ಬಳಿಕ ಅಮೃತ್ ಪೌಲ್ ಗೆ ಜಾಮೀನು ಸಿಕ್ಕಂತೆ ಆಗಿದೆ.
2021ರ ಅಕ್ಟೋಬರ್ 3ರಂದು 545 ಪಿಎಸ್ಐಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು 92 ಕೇಂದ್ರಗಳಲ್ಲಿ ನಡೆಯಿತು. ಪಿಎಸ್ಐ ನೇಮಕಾತಿ ಹಗರಣ ಹೊರಬಂದ ಬಳಿಕ ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ 110 ಜನರನ್ನು ಬಂಧಿಸಲಾಗಿದೆ.
ಅಮೃತ್ ಪೌಲ್ ಪಿಎಸ್ಐ ಹುದ್ದೆಯ ಆಕಾಂಕ್ಷಿಗಳಿಂದ 1.35 ಕೋಟಿ ರೂಪಾಯಿ ಹಣವನ್ನು ಪಡೆದಿದ್ದಾರೆ ಎಂಬ ಆರೋಪವಿದೆ. ತನಿಖೆ ವೇಳೆ ಈ ಹಣ ತಮ್ಮ ಸಹಾಯಕ ಹಾಗೂ ಬೇನಾಮಿ ಶಂಭುಲಿಂಗ ಸ್ವಾಮಿಗೆ ನೀಡಿದ್ದು ಬೆಳಕಿಗೆ ಬಂದಿತ್ತು. ಈತನಿಂದ 41 ಲಕ್ಷ ರೂ.ಗಳನ್ನು ಸಿಐಡಿ ವಶಪಡಿಸಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


