ಕಾವೇರಿ ವಿವಾದ: ಬಿಜೆಪಿ-ಜೆಡಿಎಸ್ ನಿಂದ ರಾಜಕೀಯ- ಸಿಎಂ ಸಿದ್ದರಾಮಯ್ಯ
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರತಿಭಟನೆ ನಡೆಸಬಹುದು. ಪ್ರತಿಭಟನೆಯನ್ನು ನಾವು ಅಡ್ಡಿ ಪಡಿಸುವುದಿಲ್ಲ. ಕಾವೇರಿ ವಿಚಾರ ಸಂಬಂಧ ಬಿಜೆಪಿ-ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದು ಹೇಳಿದರು.
ವಿಪಕ್ಷಗಳು ರಾಜೀನಾಮೆಗೆ ಆಗ್ರಹಿಸುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆಯಲ್ಲಿ ಹಾಗೆ ಹೇಳಲಿಲ್ಲವಲ್ಲ ಎಂದು ತಿಳಿಸಿದರು.
ಕಾವೇರಿ ನೀರು ಹರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶವಿದೆ. ನೀರು ಹರಿಸಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ನಮ್ಮ ಅರ್ಜಿ ವಜಾವಾಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನಿರ್ವಹಣಾ ಪ್ರಾಧಿಕಾರ ಎರಡರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೆವು. ಸುಪ್ರೀಂಕೋರ್ಟ್ ನಮ್ಮ ಹಾಗೂ ತಮಿಳುನಾಡಿನ ಅರ್ಜಿಯನ್ನು ತಿರಸ್ಕಾರ ಮಾಡಿದೆ.
ತಮಿಳುನಾಡು 24,000 ಕ್ಯೂಸೆಕ್ಸ್ ನೀರು ಕೇಳಿದ್ದರು.ನಂತರ 7200 ಕ್ಯೂಸೆಕ್ಸ್ ಕೇಳಿದರು. ನಾವು 5000 ಕ್ಯೂಸೆಕ್ಸ್ ನೀರು ಕೂಡ ಕೊಡಲಾಗುವುದಿಲ್ಲ. ನಮ್ಮ ಬಳಿ ನೀರಿಲ್ಲ ಎಂದು ವಾದಿಸಿದ್ದು, ಅದನ್ನು ನ್ಯಾಯಾಲಯ ಒಪ್ಪಿಲ್ಲ. ಪುನಃ ಸೆಪ್ಟೆಂಬರ್ 26 ರಂದು ಸರ್ವೋಚ್ಚ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಲಿದ್ದು. ನಮ್ಮ ವಾದವನ್ನು ಇನ್ನಷ್ಟು ಬಲವಾಗಿ ಮಂಡಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


