ಕಾವೇರಿ ವಿಚಾರದಲ್ಲಿ ಪ್ರಧಾನಿಗೆ ದೇವೇಗೌಡರ ಪತ್ರ: ಮಾಜಿ ಪಿಎಂ ನಡೆ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂಬ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂಬ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯ ಎದುರಿಸುತ್ತಿರುವ ಸಂಕಷ್ಟವನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರು ಬರೆದ ಪತ್ರವನ್ನು ನಾನು ಸ್ವಾಗತಿಸುತ್ತೇನೆ.
ಸದ್ಯದ ಪರಿಸ್ಥಿತಿಯಲ್ಲಿ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದು ಮಾತ್ರ ಈ ಪರಿಸ್ಥಿತಿಗೆ ಪರಿಣಾಮಕಾರಿ ಮತ್ತು ಸೂಕ್ತ ಪರಿಹಾರವಾಗಿದೆ, ಎಂದು ಸಿಎಂ ಹೇಳಿದರು.
ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ. ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದ್ದಾರೆ.
ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನ ಮಂತ್ರಿ ಭೇಟಿ ಮಾಡುವಂತೆ ಮಾಡಬೇಕು ಎಂದು ಬಿಜೆಪಿ ನಾಯಕರಲ್ಲಿ ಮನವಿ ಮಾಡುತ್ತೇನೆ ಎಂದಿರುವ ಸಿದ್ದರಾಮಯ್ಯ, ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


