ಕರ್ನಾಟಕ ಲೋಕಸಭೆ ಚುನಾವಣೆ: ಅಭ್ಯರ್ಥಿಗಳ ಉಮೇದುವಾರಿಕೆ; ಯದುವೀರ್, ಸೋಮಣ್ಣ, ಮೋಹನ್ ನಾಮಪತ್ರ ಸಲ್ಲಿಕೆ
ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಬೆಂಗಳೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಶುಭ ಗಳಿಗೆ ಸಿಕ್ಕಿದ್ದರಿಂದ ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಲಾಯಿತು. ಏ.3ರಂದು ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ರಾಜ್ಯ ಮಟ್ಟದ ನಾಯಕರು ಬರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನೂ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರು ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಶಾಸಕ ಸುರೇಶ್ ಕುಮಾರ್ ಅವರು ಪಿಸಿ ಮೋಹನ್ ಗೆ ಸಾಥ್ ನೀಡಿದರು.
ತುಮಕೂರಿನಲ್ಲಿ ವಿ.ಸೋಮಣ್ಣ ಅವರು ಕೂಡ ಉಮೇದುವಾರಿಕೆ ಸಲ್ಲಿಸಿದರು. ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು, ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಅವರೊಂದಿಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ನಾಮಪತ್ರ ಸಲ್ಲಿಸಿದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



