ರಾಜ್ಯ

ಬೆಂಗಳೂರು: ಹಾಡಹಗಲೇ ವ್ಯಕ್ತಿ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ, ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ವಿಡಿಯೋ ದಾಖಲು!

ಬೆಚ್ಚಿ ಬೀಳಿಸುವಂತಹ ಹಲ್ಲೆ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದ್ದು, ಹಾಡಹಗಲೇ ವ್ಯಕ್ತಿ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ದೃಶ್ಯಾವಳಿಗಳು ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ದಾಖಲಾಗಿದೆ.

ಬೆಂಗಳೂರು: ಹಾಡಹಗಲೇ ವ್ಯಕ್ತಿ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ, ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ವಿಡಿಯೋ ದಾಖಲು!
ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ
Published On :

ಬೆಂಗಳೂರು: ಬೆಚ್ಚಿ ಬೀಳಿಸುವಂತಹ ಹಲ್ಲೆ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದ್ದು, ಹಾಡಹಗಲೇ ವ್ಯಕ್ತಿ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ದೃಶ್ಯಾವಳಿಗಳು ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ದಾಖಲಾಗಿದೆ.

ಹೌದು.. ಹಾಡಹಗಲೇ ರಸ್ತೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ರಾಡ್‌ನಿಂದ ಇಬ್ಬರು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕಲ್ಯಾಣ್ ನಗರದಲ್ಲಿ ನಡೆದಿದೆ. ಮೂಲಗಳ ಪ್ರಕಾರ ಮಾರ್ಚ್ 31ರಂದು ಹೆಣ್ಣೂರು - ಬಾಣಸವಾಡಿ ನಡುವಿನ ಹೊರ ವರ್ತುಲ ರಸ್ತೆಯಲ್ಲಿ ಘಟನೆ ನಡೆದಿದ್ದು, ವ್ಯಕ್ತಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡುತ್ತಿರುವ ದೃಶ್ಯಗಳು ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದರ ಡ್ಯಾಶ್​ಬೋರ್ಡ್​ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಹರಿಕೃಷ್ಣನ್.ಪಿ ಎಂಬವರು ಈ ದೃಶ್ಯಗಳನ್ನು ತಮ್ಮ ಇನ್‌ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಘಟನೆಯಿಂದ ನಗರದ ಜನರು ಸುರಕ್ಷತೆ, ಕಾನೂನು ಸುವ್ಯವಸ್ಥೆಯ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ವಿಡಿಯೋವನ್ನು ನಗರ ಪೊಲೀಸ್ ಇಲಾಖೆಯ ಖಾತೆಗೆ ಟ್ಯಾಗ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ವಿಡಿಯೋಗೆ ಪ್ರತಿಕ್ರಿಯಿಸಿದ ಪೊಲೀಸ್ ಇಲಾಖೆ

ವೈರಲ್ ಆಗಿರುವ ವಿಡಿಯೋ ಕುರಿತು ಪೂರ್ವ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಪ್ರತಿಕ್ರಿಯಿಸಿ, ''ಗಾಯಾಳು ಅಥವಾ ಹಲ್ಲೆ ಮಾಡಿರುವ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದೇವೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು, ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುವ ಗಾಯಾಳುಗಳ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ'' ಎಂದಿದ್ದಾರೆ.

ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.