ರಾಜ್ಯ

ಬರ ಪರಿಹಾರ, ಸಾಲ ಮನ್ನಾಗೆ ಆಗ್ರಹ: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ

ಲೋಕಸಭೆ ಚುನಾವಣೆ ಕಾವು ರಂಗೇರುತ್ತಿದೆ. ರಾಜಕೀಯ ನಾಯಕರು ಚುನಾವಣಾ ಪ್ರಚಾರ, ರಾಜಕೀಯ ತಂತ್ರಗಾರಿಕೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಿರುಬಿಸಿಲಿನಲ್ಲಿ ರೈತರ ಆಕ್ರೋಶ ಜೋರಾಗಿದೆ.

ಬರ ಪರಿಹಾರ, ಸಾಲ ಮನ್ನಾಗೆ ಆಗ್ರಹ: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ
Published On :

ಬೆಳಗಾವಿ: ಲೋಕಸಭೆ ಚುನಾವಣೆ ಕಾವು ರಂಗೇರುತ್ತಿದೆ. ರಾಜಕೀಯ ನಾಯಕರು ಚುನಾವಣಾ ಪ್ರಚಾರ, ರಾಜಕೀಯ ತಂತ್ರಗಾರಿಕೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬಿರುಬಿಸಿಲಿನಲ್ಲಿ ರೈತರ ಆಕ್ರೋಶ ಜೋರಾಗಿದೆ.

ಸರ್ಕಾರ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಚುನಾವಣೆಯಲ್ಲಿ ತೊಡಗಿದ್ದು, ಇತ್ತ ರೈತರು ಪ್ರತಿಭಟನೆಗಿಳಿದಿದ್ದಾರೆ. ತಮ್ಮ ಜಾನುವಾರುಗಳಿಗೆ ಮೇವಿಲ್ಲ ನೀರಿಲ್ಲದೇ ಪರಿತಪ್ಪಿಸುತ್ತಿವೆ. ಬರ ಪರಿಹಾರವೂ ಇಲ್ಲ, ರೈತರ ಕಷ್ಟ ಹೇಳತೀರದ್ದಾಗಿದ್ದು ಇದರಿಂದ ಬೆಳಗಾವಿಯಲ್ಲಿ ರೈತರು ಇಂದು ಬೀದಿಗಿಳಿದಿದ್ದರು.

ಜಿಲ್ಲೆಯ ರೈತರು ಮತ್ತು ವಿವಿಧ ಮಠಾಧೀಶರು ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೊರಾಟಕ್ಕಿಳಿದಿದ್ದರು. ಬರಗಾಲದ ಪರಿಹಾರ ನೀಡಬೇಕು, ಸಾಲ ಮನ್ನಾ ಮಾಡಬೇಕು, ಘಟಪ್ರಭಾ ನದಿಯಿಂದ ಎಡ ಹಾಗೂ ಬಲದಂಡೆ ಕಾಲುವೆಗೆ ನೀರು ಹರಿಸಬೇಕು ಮುಖ್ಯವಾಗಿ ಜಾನುವಾರುಗಳಿಗೆ ನೀರು ಹಾಗೂ ಮೇವಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಇಂದು ಹೋರಾಟ ಆರಂಭಿಸಿದ್ದರು. ಬೆಳಗಾವಿಯ ಚನ್ನಮ್ಮ ವೃತ್ತದಿಂದ ಹೋರಾಟ ಆರಂಭಿಸಿದ ರೈತರು ಡಿಸಿ ಕಚೇರಿವರೆಗೂ ಪ್ರತಿಭಟನಾ ರ‍್ಯಾಲಿ ನಡೆಸಿದರು.

ರೈತರು ಹೋರಾಟ ಮಾಡುವ ವಿಚಾರ ತಿಳಿದು ಡಿಸಿ ಕಚೇರಿ ಬಳಿ ಬ್ಯಾರಿಕೇಡ್ ಹಾಕಿ ಯಾರು ಒಳ ಬಾರದಂತೆ ತಡೆದಿದ್ದರು. ಇದನ್ನು ಗಮನಿಸಿದ ರೈತರು ಆಕ್ರೋಶಗೊಂಡು ಬ್ಯಾರಿಕೇಡ್ ತಳ್ಳಿ ಗೇಟ್ ಹಾರಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಿದರು. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ತಳ್ಳಾಟ ನೂಕಾಟ ಉಂಟಾಯಿತು. ಇದೇ ವೇಳೆ ಡಿಸಿಪಿ ರೋಹನ್ ಜಗದೀಶ್ ರೈತರನ್ನು ತಳ್ಳಿದರು ಎಂಬ ಕಾರಣಕ್ಕೆ ಆಕ್ರೋಶಗೊಂಡ ರೈತರು ಕಚೇರಿ ಎದುರಿನ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸಾಲಮನ್ನಾ ಮಾಡಲು ಸುಗ್ರವಾಜ್ಞೆ ಹೊರಡಿಸುವಂತೆ ರೈತರು ಪಟ್ಟು ಹಿಡಿದರು. ಆಗ ಇದು ಸರ್ಕಾರದ ಮಟ್ಟದಲ್ಲಿ ನಡೆಯುವ ಕೆಲಸ ನಿಮ್ಮ ಮನವಿಯನ್ನು ಸರ್ಕಾರಕ್ಕೆ ಕಳುಹಿಸುತ್ತೇವೆ ಎಂದು ಹೇಳಿದರು. ಬ್ಯಾಂಕ್​ಗಳಿಂದ ಸಾಲ ಮರುಪಾವತಿ ಮಾಡುವಂತೆ ಕಿರುಕುಳ ನೀಡಲಾಗುತ್ತಿದ್ದು ಅದರ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಇತ್ತ ಮೇವಿನ ವ್ಯವಸ್ಥೆ, ನೀರಿನ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆಯನ್ನ ಡಿಸಿ ನೀಡಿದರು. ಆದರೆ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗೆ ನೀರು ಹರಿಸಲು ಡಿಮ್ಯಾಂಡ್ ಇದ್ದು ಅದನ್ನು ಕೂಡ ಪ್ರಾದೇಶಿಕ ಆಯುಕ್ತರ ಗಮನಕ್ಕೆ ತಂದು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ತಮ್ಮ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ರೈತ ಮುಖಂಡರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.