ಬಿಜೆಪಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಡಿಕೆಶಿ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಅವರು ಈ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಖಾಸಗಿ ದೂರು ಸಲ್ಲಿಸಿದ್ದಾರೆ.
ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ ವೊಂದನ್ನು ಕಾಂಗ್ರೆಸ್ ಪಕ್ಷ ಹಂಚಿಕೊಂಡಿತ್ತು. ಆದ್ದರಿಂದ ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು.
ಇದೀಗ ಡಿಕೆ ಶಿವಕುಮಾರ್ ಮತ್ತು ಬಿ.ಆರ್.ನಾಯ್ಡು ವಿರುದ್ಧ 153(a), 504, 506,464 ಸೆಕ್ಷನ್ ಅಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


