ರಾಜ್ಯ

ಚಾಮರಾಜನಗರ: ಆನೆಗೆ ಡಿಕ್ಕಿ ಹೊಡೆದಿದ್ದ ವಾಹನ ಪತ್ತೆ ಹಚ್ಚುವಲ್ಲಿ ಅಧಿಕಾರಿಗಳು ವಿಫಲ

ಆನೆಗೆ ಡಿಕ್ಕಿ ಹೊಡೆದಿದ್ದ ವಾಹನ ಪತ್ತೆ ಮಾಡುವಲ್ಲಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ವಿಫಲರಾಗಿದ್ದಾರೆ.

ಚಾಮರಾಜನಗರ: ಆನೆಗೆ ಡಿಕ್ಕಿ ಹೊಡೆದಿದ್ದ ವಾಹನ ಪತ್ತೆ ಹಚ್ಚುವಲ್ಲಿ ಅಧಿಕಾರಿಗಳು ವಿಫಲ
ಸಂಗ್ರಹ ಚಿತ್ರ
Published On :

ಚಾಮರಾಜನಗರ: ಆನೆಗೆ ಡಿಕ್ಕಿ ಹೊಡೆದಿದ್ದ ವಾಹನ ಪತ್ತೆ ಮಾಡುವಲ್ಲಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ವಿಫಲರಾಗಿದ್ದಾರೆ.

ಮಾರ್ಚ್ 29 ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವ್ಯಾಪ್ತಿಯ ರಸ್ತೆಯ ಪಕ್ಕದಲ್ಲಿ ದಂಡ ಮುರಿದ ಸ್ಥಿತಿಯಲ್ಲಿ ಆನೆ ಬಿದ್ದಿರುವುದು ಪತ್ತೆಯಾಗಿತ್ತು.

ವೇಗವಾಗಿ ಬಂದ ವಾಹನವೊಂದು ಆನೆಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿತ್ತು. ಇದರಂತೆ ಆನೆಗೆ ಡಿಕ್ಕಿ ಹೊಡೆದ ವಾಹನದ ಪತ್ತೆಗೆ ಶ್ವಾನ ದಳವನ್ನೂ ನೇಮಿಸಲಾಗಿತ್ತು. ಆದರೆ ರಕ್ತದ ಕಲೆಗಳು ಸ್ವಲ್ಪ ದೂರದಲ್ಲಿ ಮಾತ್ರ ಕಂಡುಬಂದ ಹಿನ್ನೆಲೆಯಲ್ಲಿ ವಾಹನ ಪತ್ತೆ ಯಶಸ್ವಿಯಾಗಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆ ನಡೆದಿರುವುದು ಅರಣ್ಯ ಪ್ರದೇಶದ ಹೊರಭಾಗವಾಗಿದ್ದರಿದ, ಸುತ್ತಮುತ್ತ ಯಾವುದೇ ಸಿಸಿಟಿವಿ ಕ್ಯಾಮೆರಾಗಳು ಇಲ್ಲದ ಕಾರಣ ವಾಹನ ಪತ್ತೆ ಕಷ್ಟಕವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.