ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರದಲ್ಲಿ ಬೆಂಬಲ ಕೊಟ್ಟ ವ್ಯಕ್ತಿ ನಾನು: ಜಗದೀಶ್ ಶೆಟ್ಟರ್
ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವ ವಿಚಾರದಲ್ಲಿ ಸಂಪೂರ್ಣ ಬೆಂಬಲ ಕೊಟ್ಟ ವ್ಯಕ್ತಿ ನಾನು. ಹೀಗಿರುವಾಗ ನಾನು ಇದಕ್ಕೆ ವಿರೋಧ ಮಾಡುವ ಪ್ರಶ್ನೆಯೇ ಬರುವುದಿಲ್ಲ.

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವ ವಿಚಾರದಲ್ಲಿ ಸಂಪೂರ್ಣ ಬೆಂಬಲ ಕೊಟ್ಟ ವ್ಯಕ್ತಿ ನಾನು. ಹೀಗಿರುವಾಗ ನಾನು ಇದಕ್ಕೆ ವಿರೋಧ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಚುನಾವಣೆಯ ವೇಳೆ ಇಂತಹ ಅಪಪ್ರಚಾರಗಳು ನಡೆಯುತ್ತಲೇ ಇರುತ್ತವೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ತಮ್ಮ ವಿರೋಧಿಗಳಿಗೆ ತಿರುಗೇಟು ನೀಡಿದರು.
ಬೆಳಗಾವಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳು ಈ ವಿಷಯದಲ್ಲಿ ಮತದಾರರನ್ನು ದಾರಿ ತಪ್ಪಿಸುತ್ತಿವೆ ಎಂದು ಆರೋಪಿಸಿದರು. ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಾದ ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ಪ್ರಚಾರ ಮತ್ತು ರ್ಯಾಲಿಗಳಲ್ಲಿ ಭಾಗವಹಿಸಿ ಬೆಂಬಲ ನೀಡಲಿದ್ದಾರೆ ಎಂದರು.
ಈಗಾಗಲೇ ಗೋಕಾಕ ಮತ್ತು ಅರಭಾವಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದೇನೆ. ಜಾರಕಿಹೊಳಿ ಸಹೋದರರು ನನಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಈ ಕ್ಷೇತ್ರಗಳಿಂದ ಹೆಚ್ಚಿನ ಮತಗಳ ಮುನ್ನಡೆಯನ್ನು ನಾನು ನಿರೀಕ್ಷಿಸುತ್ತಿದ್ದೇನೆ ಎಂದು ಅವರು ಹೇಳಿದರು.
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಈ ಚುನಾವಣೆ ನಡೆಯುತ್ತಿದೆ. ಸ್ವಯಂ ಪ್ರೇರಿತ ನಾಗರಿಕರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ ಮತ್ತು ಹಾರೈಸುತ್ತಿದ್ದಾರೆ ಎಂದು ಅವರು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಯ ಬಗ್ಗೆ ದಾಖಲೆ ಕೊಡುತ್ತಿದ್ದೇವೆ. ನಮ್ಮ ಶಾಸಕರು, ಸಂಸದರು ಏನು ಕೆಲಸ ಮಾಡಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ವಿನಾಕಾರಣ ರಾಜಕೀಯ ಮಾಡುವದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



