ಕ್ರಿಕೆಟಿಗನಿಗೆ 60 ನಿಮಿಷದಲ್ಲಿ ವೀಸಾ: ವಿದೇಶಾಂಗ ಇಲಾಖೆಗೆ ಹೈಕೋರ್ಟ್ ಮೆಚ್ಚುಗೆ
ರಣಜಿ ಕ್ರಿಕೆಟ್ ಆಟಗಾರ ಕೆ ಸಿ ಕಾರಿಯಪ್ಪ ಅವರ ವೀಸಾಗೆ ಅಡ್ಡಿಯಾಗಿದ್ದ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರವನ್ನು ವಿತರಿಸಿದ 60 ನಿಮಿಷಗಳಲ್ಲೇ ಅವರ ವೀಸಾ ಒದಗಿಸಲು ಮುಂದಾದ ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ಕಾರ್ಯವೈಖರಿಗೆ ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದೆ.

ಬೆಂಗಳೂರು: ರಣಜಿ ಕ್ರಿಕೆಟ್ ಆಟಗಾರ ಕೆ ಸಿ ಕಾರಿಯಪ್ಪ ಅವರ ವೀಸಾಗೆ ಅಡ್ಡಿಯಾಗಿದ್ದ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರವನ್ನು ವಿತರಿಸಿದ 60 ನಿಮಿಷಗಳಲ್ಲೇ ಅವರ ವೀಸಾ ಒದಗಿಸಲು ಮುಂದಾದ ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ಕಾರ್ಯವೈಖರಿಗೆ ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದೆ.
ಬೆಂಗಳೂರಿನ ಕೆ ಸಿ ಕಾರಿಯಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ವಿದೇಶಾಂಗ ಸಚಿವಾಲಯದ ಪರ ಹಾಜರಾಗಿದ್ದ ಉಪ ಸಾಲಿಸಿಟರ್ ಜನರಲ್ ಎಚ್ ಶಾಂತಿಭೂಷಣ್ ಅವರು ಪೊಲೀಸ್ ಕ್ಲಿಯರೆನ್ಸ್ ವಿತರಿಸಿದರೆ 60 ವೀಸಾ ಒದಗಿಸಲಾಗುವುದು ಎಂದು ಪೀಠಕ್ಕೆ ಭರವಸೆ ನೀಡಿದ್ದರು. ಇದರನ್ವಯ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಕ್ಲಿಯರೆನ್ಸ್ ನೀಡಿದ್ದರು.
ಕ್ಲಿಯರೆನ್ಸ್ ದೊರೆತ 60 ನಿಮಿಷಗಳ ಅವಧಿಯಲ್ಲೇ ತಾವು ಕೊಟ್ಟ ಮಾತಿನಂತೆ ಶಾಂತಿಭೂಷಣ್, ಕಾರಿಯಪ್ಪ ಅವರಿಗೆ ವೀಸಾ ದೊರೆಯಲು ತಕ್ಷಣದ ಕ್ರಮ ಕೈಗೊಂಡಿದ್ದರು. ಇದಕ್ಕೆ ಪೀಠ ಆದೇಶದಲ್ಲೇ ಮೆಚ್ಚುಗೆ ವ್ಯಕ್ತಪಡಿಸಿ ಅರ್ಜಿ ವಿಲೇವಾರಿ ಮಾಡಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಂ ರಾಘವನ್ ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬರು ಕೆ ಸಿ ಕಾರಿಯಪ್ಪ ವಿರುದ್ಧ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ, ಕಾರಿಯಪ್ಪ ಅವರ ವಿದೇಶ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿತ್ತು.
ಕ್ರಿಕೆಟ್ ಆಡಲು ಇಂಗ್ಲೆಂಡ್‌ಗೆ ಪ್ರಯಾಣಿಸಬೇಕಿದೆ. ಆದರೆ, ಪೊಲೀಸ್ ಕ್ಲಿಯರೆನ್ಸ್ ಸಿಗದೇ ಅಡ್ಡಿಯಾಗುತ್ತಿದೆ. ಆದ್ದರಿಂದ, ಪೊಲೀಸ್ ಕ್ಲಿಯರೆನ್ಸ್ ನೀಡಲು ನಿರ್ದೇಶಿಸಬೇಕು ಎಂದು ಕೋರಿ ಕಾರಿಯಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



