ಬಾಲಕ ಸಾತ್ವಿಕ್ ರಕ್ಷಣಾ ಕಾರ್ಯಾಚರಣೆ ಯಶಸ್ವಿ: ಸಿಎಂ ಸಿದ್ದರಾಮಯ್ಯ ಪ್ರಶಂಸೆ
ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮ್ಯ ಪ್ರಶಂಸಿಸಿದ್ದಾರೆ.

ಬೆಂಗಳೂರು: ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮ್ಯ ಪ್ರಶಂಸಿಸಿದ್ದಾರೆ.

ಸಾವು ಗೆದ್ದ ಸಾತ್ವಿಕ್: 20 ಗಂಟೆ ನಿರಂತರ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ, ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ - ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದಿದ್ದಾರೆ.
ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


