ಲೋಕಸಭಾ ಚುನಾವಣೆ 2024: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 90,000 ಲೀಟರ್ ಮದ್ಯ ವಶಕ್ಕೆ
ಲೋಕಸಭಾ ಚುನಾವಣೆ 2024 ಕ್ಕೆ ನೀತಿ ಸಂಹಿತೆ ಜಾರಿಯಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು 90,443 ಲೀಟರ್ ಗಳಷ್ಟು ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ: ಲೋಕಸಭಾ ಚುನಾವಣೆ 2024 ಕ್ಕೆ ನೀತಿ ಸಂಹಿತೆ ಜಾರಿಯಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು 90,443 ಲೀಟರ್ ಗಳಷ್ಟು ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ನೀತಿ ಸಂಹಿತೆ ಜಾರಿಯಾದಾಗಿನಿಂದಲೂ 1,95,47,179 ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದ್ದರೆ, ಏ.03 ರಂದು Rs.8,69,950 ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ಈ ವರೆಗೆ 278 ಎಫ್ಐಆರ್ ದಾಖಲಾಗಿದೆ. ರಾಜ್ಯದಲ್ಲಿ ಲೋಕಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಏ.26 ರಂದು ಮೊದಲ ಹಂತದಲ್ಲಿ ನಡೆದರೆ ಮೇ.7 ರಂದು 2 ನೇ ಹಂತದಲ್ಲಿ ಮತದಾನ ನಡೆಯಲಿದೆ.
ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ, ದೂರವಾಣಿ ಮೂಲಕ ಸ್ವೀಕರಿಸಿದ 157 ಮಾಹಿತಿ ವಿನಂತಿಗಳಿಗೆ ಪ್ರತಿಕ್ರಿಯೆ ನೀಡಿದ್ದು ಪರಿಹರಿಸಿದ್ದಾರೆ (1950). C-Whistle ಅಪ್ಲಿಕೇಶನ್ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸುವಲ್ಲಿ ಸಾಧನವಾಗಿದೆ ಎಂಬುದು ಸಾಬೀತಾಗಿದ್ದು, ಈ ಆಪ್ ಮೂಲಕ 59 ದೂರುಗಳನ್ನು ಸ್ವೀಕರಿಸಲಾಗಿದೆ.
ರಾಷ್ಟ್ರೀಯ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಎನ್ಜಿಆರ್ಎಸ್) ಮೂಲಕ ಜಿಲ್ಲೆಯಲ್ಲಿ ಒಟ್ಟು 92 ದೂರುಗಳು ಬಂದಿದ್ದು, ಅವುಗಳಲ್ಲಿ 90 ಅನ್ನು ಪರಿಣಾಮಕಾರಿಯಾಗಿ ಪರಿಹರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



