ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿಗೆ ಸಂಕಷ್ಟ: ವೈಯಕ್ತಿಕ ಮಾಹಿತಿ ಮುಚ್ಚಿಟ್ರಾ ಸುನೀಲ್ ಬೋಸ್? ನಾಮಪತ್ರ ತಿರಸ್ಕರಿಸುವಂತೆ ಬಿಜೆಪಿ ದೂರು!
ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸಮಾಜ ಕಲ್ಯಾಣ ಸಚಿವ ಎಚ್ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೊಸ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿದಿದ್ದಾರೆ.

ಚಾಮರಾನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸಮಾಜ ಕಲ್ಯಾಣ ಸಚಿವ ಎಚ್ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೊಸ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿದಿದ್ದಾರೆ.
ನಾಮಪತ್ರ ಸಲ್ಲಿಕೆಗೆ ನಿನ್ನೆ ಕೊನೆಯ ದಿನವಾಗಿದ್ದರಿಂದ ಈಗಾಗಲೇ ಸುನೀಲ್ ಬೋಸ್ ನಾಮಪತ್ರ ಸಲ್ಲಿಸಿದ್ದರು. ಆದರೆ ನಾಮಪತ್ರದಲ್ಲಿ ಪ್ರಮುಖ ಮಾಹಿತಿಯನ್ನು ತಿಳಿಸಿದ ಮುಚ್ಚಿಟ್ಟಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ತಮ್ಮ ಪ್ರಮಾಣಪತ್ರದಲ್ಲಿ ವೈವಾಹಿಕ ಜೀವನದ ಕುರಿತು ಮಾಹಿತಿ ಮರೆಮಾಚಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ಬಿಜೆಪಿ ನಾಯಕರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ಸುನೀಲ್ ಬೋಸ್ ಅವರು ಪ್ರಮಾಣ ಪತ್ರದಲ್ಲಿ ಹೆಂಡತಿ, ಮಕ್ಕಳ, ಕುಟುಂಬದ ಮಾಹಿತಿ ಮುಚ್ಚಿಟ್ಟಿದ್ದಾರೆ. ಅಲ್ಲದೇ ಪತ್ನಿ, ಮಕ್ಕಳು, ತಂದೆ-ತಾಯಿ ಆಸ್ತಿ ವಿವರ ಘೋಷಿಸಿಲ್ಲ. ಹೀಗಾಗಿ ಸುನೀಲ್ ಬೋಸ್ ಅವರ ನಾಮಪತ್ರವನ್ನು ಅಸಿಂಧುಗೊಳಿಸುವಂತೆ ಚಾಮರಾಜನಗರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜು ಅವರು ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



