ಕೊಳವೆ ಬಾವಿ ಗುರಂತ: ಬದುಕಿ ಬಂದ ಸಾತ್ವಿಕ್ ಗೆ ಮರು ನಾಮಕರಣ, ಹೆಸರು 'ಸಿದ್ದಲಿಂಗ'!
ವಿಜಯಪುರದ ಇಂಡಿ ತಾಲ್ಲೂಕಿನಲ್ಲಿ ಕೊಳವೆಬಾವಿಗೆ ಬಿದ್ದು ಪವಾಡ ಸದೃಶ ರೀತಿಯಲ್ಲಿ ಬದುಕಿ ಬಂದ ಮಗು ಸಾತ್ವಿಕ್ ನ ಹೆಸರನ್ನು ಆತನ ಪೋಷಕರು ಬದಲಾವಣೆ ಮಾಡಲು ನಿರ್ಧರಿಸಿದ್ದಾರೆ.

ವಿಜಯಪುರ: ವಿಜಯಪುರದ ಇಂಡಿ ತಾಲ್ಲೂಕಿನಲ್ಲಿ ಕೊಳವೆಬಾವಿಗೆ ಬಿದ್ದು ಪವಾಡ ಸದೃಶ ರೀತಿಯಲ್ಲಿ ಬದುಕಿ ಬಂದ ಮಗು ಸಾತ್ವಿಕ್ ನ ಹೆಸರನ್ನು ಆತನ ಪೋಷಕರು ಬದಲಾವಣೆ ಮಾಡಲು ನಿರ್ಧರಿಸಿದ್ದಾರೆ.
ಕೊಳವೆ ಬಾವಿಯಲ್ಲಿ ಬಿದ್ದಿದ್ದ ತನ್ನ ಮಗುವನ್ನು ಬದುಕಿಸಿಕೊಡುವಂತೆ ದೇವರಲ್ಲಿ ಹರಕೆ ಹೊತ್ತಿದ್ದ ತಾಯಿ ಪೂಜಾ, ಮನೆಯಿಂದ ಮಠದವರೆಗೆ ದೀಡ ನಮಸ್ಕಾರ ಹಾಕಿ, ಮಗುವಿಗೆ ಮರು ನಾಮಕರಣ ಮಾಡುವುದಾಗಿ ಹೇಳಿಕೊಂಡಿದ್ದರು.
ಅದರಂತೆ ಇದೀಗ ಸಾತ್ವಿಕ್ ಮಗುವಿನ ಹೆಸರನ್ನು ಸಿದ್ದಲಿಂಗ ಎಂದು ಬದಲಾಯಿಸಲು ಪೋಷಕರು ನಿರ್ಧರಿಸಿದ್ದಾರೆ. ಬರುವ 28ರಂದು ಪೂಜಾ ತಮ್ಮ ಮನೆಯಿಂದ ಲಚ್ಯಾನ್ ಸಿದ್ದಲಿಂಗ ಮಹಾರಾಜರ ಮಠದ ವರೆಗೆ ದೀಡ ನಮಸ್ಕಾರ ಹಾಕಿ ಮಠದಲ್ಲಿ ತೊಟ್ಟಿಲು ಕಟ್ಟಿ ಮರುನಾಮಕರಣ ಮಾಡಲಿದ್ದಾರೆ.
“ಸಿದ್ದಲಿಂಗ ಮಹಾರಾಜರ ಪವಾಡದಿಂದ ನನ್ನ ಮಗ ಬದುಕಿ ಬಂದಿದ್ದಾನೆ. ಹೀಗಾಗಿ ಸಾತ್ವಿಕ್ ಹೆಸರು ಬದಲಿಗೆ ಸಿದ್ದಲಿಂಗ ಎಂಬ ಹೆಸರನ್ನು ನಾಮಕರಣ ಮಾಡುತ್ತೇವೆ. ರಕ್ಷಣೆ ಮಾಡಿದ ಎಲ್ಲ ಸಿಬ್ಬಂದಿಗೆ ಜಿಲ್ಲಾಡಳಿತಕ್ಕೆ ಧನ್ಯವಾದ ಹೇಳುತ್ತೇನೆ,” ಎಂದು ಮಗುವಿನ ತಾಯಿ ಪೂಜಾ ಹೇಳಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಗೂ ಅವರು ಧನ್ಯವಾದ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



