ಬೆಂಗಳೂರು: 2 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ, ವಿದೇಶಿ ಪ್ರಜೆ ಬಂಧನ
ಬೆಂಗಳೂರು ಪೊಲೀಸರು ಐವರಿ ಕೋಸ್ಟ್ ಪ್ರಜೆಯೊಬ್ಬನನ್ನು ಬಂಧಿಸಿದ್ದು ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಬೆಂಗಳೂರು ಪೊಲೀಸರು ಐವರಿ ಕೋಸ್ಟ್ ಪ್ರಜೆಯೊಬ್ಬನನ್ನು ಬಂಧಿಸಿದ್ದು ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳಕ್ಕೆ ಸಿಕ್ಕ ಮಾಹಿತಿ ಮೇರೆಗೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ತಂಡವು ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ 33 ವರ್ಷದ ಸೆಕಾ ಘಿಸ್ಲೇನ್ ತಾನೊ ಎಂಬಾತನನ್ನು ಬೊಮ್ಮನಹಳ್ಳಿಯಲ್ಲಿ ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ತಿಳಿಸಿದ್ದಾರೆ.
ಸೆಕಾ ಘಿಸ್ಲೇನ್ ಬಳಿಯಿದ್ದ ಮೊಬೈಲ್ ಫೋನ್ ಮತ್ತು ತೂಕದ ಯಂತ್ರದೊಂದಿಗೆ ಬಿಳಿ, ಕಂದು, ಹಳದಿ ಮತ್ತು ಗುಲಾಬಿ ಸೇರಿದಂತೆ ಎರಡು ಕೆಜಿ ಎಂಡಿಎಂಎ (ಮೆಥಿಲೀನ್ ಡಿಯೋಕ್ಸಿ ಮೆಥಾಂಫೆಟಮೈನ್) ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
2022ರಲ್ಲಿ ವ್ಯಾಪಾರ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದ ಸೆಕಾ ಘಿಸ್ಲೇನ್ ನಂತರ ಮುಂಬೈ ಮತ್ತು ದೆಹಲಿಯಲ್ಲಿ ಗಾರ್ಮೆಂಟ್ ವ್ಯಾಪಾರದಲ್ಲಿ ತೊಡಗಿಸಿಕೊಂಡಿರುವುದಾಗಿ ಸುಳ್ಳು ಹೇಳಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಎಂದು ದಯಾನಂದ ತಿಳಿಸಿದರು.
ಸೆಕಾ ಘಿಸ್ಲೇನ್ ವಿರುದ್ಧ 2022ರಲ್ಲಿ ಶಂಕರಪುರ ಪೊಲೀಸ್ ಠಾಣೆಯಲ್ಲಿ ನಾರ್ಕೋಟಿಕ್ ಡ್ರಗ್ಸ್ ಆ್ಯಂಡ್ ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಕಳೆದ ಅಕ್ಟೋಬರ್‌ನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದನು. ಆದರೆ ಬಿಡುಗಡೆ ಆದ ನಂತರವೂ ಅದೇ ಅಕ್ರಮ ದಂಧೆ ಮುಂದುವರಿಸಿದ್ದನು.
ಸದ್ಯ ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ದಯಾನಂದ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



