ರಾಜ್ಯ

ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣಕ್ಕೆ ತಿರುವು: ಅಂಗಡಿ ಮಾಲೀಕ ಮುಖೇಶ್ ವಿರುದ್ಧವೂ FIR ದಾಖಲು!

ನಗರ್ತಪೇಟೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ ಹನುಮಾನ್‌ ಚಾಲೀಸಾ ಪ್ರಕರಣದಲ್ಲಿ ಈಗ ಹೊಸ ತಿರುವು ಸಿಕ್ಕಿದೆ. ಅನ್ಯಕೋಮಿನ ಯುವಕರಿಂದ ಹಲ್ಲೆಗೊಳಗಾದ ಅಂಗಡಿ ಮಾಲೀಕ ಮುಖೇಶ್ ವಿರುದ್ಧವೇ ಇದೀಗ ಎಫ್ಐಆರ್ ದಾಖಲಾಗಿದೆ.

ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣಕ್ಕೆ ತಿರುವು: ಅಂಗಡಿ ಮಾಲೀಕ ಮುಖೇಶ್ ವಿರುದ್ಧವೂ FIR ದಾಖಲು!
ಗಾಯಾಳು ಅಂಗಡಿ ಮಾಲೀಕ ಮುಖೇಶ್
Published On :

ಬೆಂಗಳೂರು: ನಗರ್ತಪೇಟೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ ಹನುಮಾನ್‌ ಚಾಲೀಸಾ ಪ್ರಕರಣದಲ್ಲಿ ಈಗ ಹೊಸ ತಿರುವು ಸಿಕ್ಕಿದೆ. ಅನ್ಯಕೋಮಿನ ಯುವಕರಿಂದ ಹಲ್ಲೆಗೊಳಗಾದ ಅಂಗಡಿ ಮಾಲೀಕ ಮುಖೇಶ್ ವಿರುದ್ಧವೇ ಇದೀಗ ಎಫ್ಐಆರ್ ದಾಖಲಾಗಿದೆ.

ಘಟನೆ ಸಂಬಂಧ ಅಂದು ಸುಲೈಮನ್ ಎಂಬಾತನ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಮುಖೇಶ್ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ರಂಜಾನ್ ಇದ್ದರೂ ಭಕ್ತಿ ಗೀತೆ ಹಾಕಿ ಕಿರಿಕ್ ಮಾಡುತ್ತಿದ್ದ ಎಂದು ಸುಲೈಮನ್ ತಂದೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ನಿರ್ದೇಶನ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಮುಖೇಶ್ ವಿರುದ್ಧ ಐಪಿಸಿ ಸೆಕ್ಷನ್‌ 506(ಕ್ರಿಮಿನಲ್‌ ಬೆದರಿಕೆ), 504(ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 323(ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?

ರಂಜಾನ್ ಇದ್ದರೂ ಭಕ್ತಿ ಗೀತೆ ಹಾಕಿ ಮುಖೇಶ್‌ ಕಿರಿಕ್ ಮಾಡುತ್ತಿದ್ದ. ಮಾರ್ಚ್ 17 ರಂದು ಸುಲೇಮಾನ್ ಸೇರಿ ಸ್ನೇಹಿತರು ಮುಖೇಶ್‌ಗೆ ಪ್ರಶ್ನಿಸಿದ್ದರು. ಪವಿತ್ರ ರಂಜಾನ್ ಹಬ್ಬವಿದೆ, ಮೂರು ಸಾವಿರ ಮಂದಿ ಇದೇ ರಸ್ತೆಯಲ್ಲಿ ಪ್ರಾರ್ಥನೆಗೆ ಹೋಗುತ್ತಾರೆ. ಇಷ್ಟು ಸೌಂಡ್ ಇಟ್ಟು ಹಾಡುಗಳನ್ನು ಹಾಕುವುದು ಯಾಕೆ ಎಂದು ಕೇಳಿದ್ದರು.

ಪ್ರಶ್ನೆ ಕೇಳಿದ್ದಕ್ಕೆ ನನ್ನ ಮಗನ ಮೇಲೆ ಮುಖೇಶ್ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ್ದು ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಹಲಸೂರು ಗೇಟ್ ಪೊಲೀಸರು, ಮುಕೇಶ್ ಅವರನ್ನು ವಿಚಾರಣೆಗೆ ಕರೆಸಿಕೊಳ್ಳಬೇಕಿದೆ. ಸುಲೇಮಾನ್, ಶಾನವಾಜ್, ರೋಹಿತ್, ದಾನಿಶ್, ತರುಣ ಮತ್ತು ಇತರ ಆರೋಪಿಗಳು ಕೆಲವು ದಿನಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆಂದು ಹೇಳಿದ್ದಾರೆ.

ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಮುಖೇಶ್‌ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಪ್ರತಿಭಟಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.