ಸಾಂಕ್ರಾಮಿಕ ರೋಗ ತಡೆಗೆ ಸಹಕಾರ ನೀಡಿ: BWSSB ಗೆ ಬಿಬಿಎಂಪಿ ಪತ್ರ
ನಗರದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸಹಕಾರ ನೀಡುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ಅವರು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ನಗರದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸಹಕಾರ ನೀಡುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ಅವರು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಜಲಮಂಡಳಿಯ ಪಾತ್ರವು ನಿರ್ಣಾಯಕವಾಗಿದೆ ಎಂದು ಪತ್ರದಲ್ಲಿ ತಿಳಿಸಿರುವ ಅವರು, BWSSB ಅನುಸರಿಸಬೇಕಾದ ಕ್ರಮಗಳನ್ನು ಪಟ್ಟಿ ಮಾಡಿದ್ದಾರೆ.
ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಗಾಗಿ ನೀರಿನ ಮಾದರಿಗಳನ್ನು ಹಿರಿಯ ಆರೋಗ್ಯ ಪರಿವೀಕ್ಷಕರು ಸಂಗ್ರಹಿಸಿ ಪಿಎಚ್ಐ ಲ್ಯಾಬ್ಗೆ ಪ್ರತಿನಿತ್ಯ ಕಳುಹಿಸಬೇಕು.
ಸಾಂಕ್ರಾಮಿಕ ರೋಗಗಳು ವರದಿಯಾದ ಪ್ರದೇಶಗಳಲ್ಲಿನ ಮ್ಯಾನ್‌ಹೋಲ್‌ಗಳು ಮತ್ತು ಚರಂಡಿಗಳಿಂದ ಮಾದರಿಗಳನ್ನು ಸಂಗ್ರಹಿಸಲು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು.
ನೀರಿನ ಪೈಪ್‌ಗಳು ಸೋರಿಕೆಯಾಗುತ್ತಿದೆಯೇ ಎಂದು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



