ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್ ಪಲ್ಟಿ ಹೊಡೆದು ನಾಲ್ವರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿದ ಖಾಸದಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನಲ್ಲಿ ನಡೆದಿದೆ.

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸದಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನಲ್ಲಿ ನಡೆದಿದೆ.
ಬೆಂಗಳೂರಿನಿಂದ ಗೋಕರ್ಣದತ್ತ ಶಿವಮೊಗ್ಗ ಮಾರ್ಗವಾಗಿ ಬಸ್ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ 50 ಮಂದಿ ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ನಡುವೆ ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



