ರಾಜ್ಯ

ರಾಮನಗರ: ಬೆಳಗ್ಗೆ ಸಾವು, ಮಧ್ಯಾಹ್ನ ಮರುಜೀವ, ಮತ್ತೆ ಸಾವು; ಮತ್ತೆ ಜೀವ ಬರಬಹುದೆಂದು ಶವದ ಮುಂದೆ ಕಾದು ಕುಳಿತ ಕುಟುಂಬಸ್ಥರು!

ರಾಮನಗರದ ಚನ್ನಪಟ್ಟಣ ತಾಲೂಕಿನ ಹುಚ್ಚಯ್ಯನದೊಡ್ಡಿಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯೋರ್ವನಿಗೆ ಮತ್ತೆ ಜೀವ ಬಂದು ನಂತರ ಮತ್ತೆ ಮೃತಪಟ್ಟಿರುವುದು ವೈದ್ಯಕೀಯ ಲೋಕದಲ್ಲಿ ಅಚ್ಚರಿ ಮೂಡಿಸಿದೆ.

ರಾಮನಗರ: ಬೆಳಗ್ಗೆ ಸಾವು, ಮಧ್ಯಾಹ್ನ ಮರುಜೀವ, ಮತ್ತೆ ಸಾವು; ಮತ್ತೆ ಜೀವ ಬರಬಹುದೆಂದು ಶವದ ಮುಂದೆ ಕಾದು ಕುಳಿತ ಕುಟುಂಬಸ್ಥರು!
ಮೃತ ಶಿವರಾಮು
Published On :

ರಾಮನಗರ: ರಾಮನಗರದ ಚನ್ನಪಟ್ಟಣ ತಾಲೂಕಿನ ಹುಚ್ಚಯ್ಯನದೊಡ್ಡಿಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯೋರ್ವನಿಗೆ ಮತ್ತೆ ಜೀವ ಬಂದು ನಂತರ ಮತ್ತೆ ಮೃತಪಟ್ಟಿರುವುದು ವೈದ್ಯಕೀಯ ಲೋಕದಲ್ಲಿ ಅಚ್ಚರಿ ಮೂಡಿಸಿದೆ.

ಕೂಲಿ ಕಾರ್ಮಿಕ 55 ವರ್ಷದ ಶಿವರಾಮು ಎಂಬುವರು ಬೆಳಗ್ಗೆ 6.30ಕ್ಕೆ ಮೃತಪಟ್ಟಿದ್ದ ವ್ಯಕ್ತಿಗೆ ಮಧ್ಯಾಹ್ನ 12 ಗಂಟೆಗೆ ಮರುಜೀವ ಬಂದಿದೆ. ಬಳಿಕ ಮಧ್ಯಾಹ್ನ 12.45ಕ್ಕೆ ಮತ್ತೆ ಮೃತಪಟ್ಟಿದ್ದಾರೆ. ಬೆಳಗ್ಗೆ ಶಿವರಾಮು ಅವರು ಕುಸಿದುಬಿದ್ದಿದ್ದರು. ಕೂಡಲೇ ಕುಟುಂಬಸ್ಥರು ವೈದ್ಯರನ್ನು ಕರೆಸಿ ತಪಾಸಣೆ ನಡೆಸಿದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ನಂತರ ಶವಸಂಸ್ಕಾರಕ್ಕೆ ಮೃತದೇಹವನ್ನು ಕೊಂಡೊಯ್ಯುವಾಗ ಶಿವರಾಮು ಎದ್ದು ಕುಳಿತಿದ್ದರು.

ಶಿವರಾಮುಗೆ ಮತ್ತೆ ಜೀವ ಬಂದಿದ್ದರಿಂದ ಕುಟುಂಬಸ್ಥರು ವೈದ್ಯರಿಗೆ ಮಾಹಿತಿ ನೀಡಲಾಗಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ವೈದ್ಯರು ಶಿವರಾಮುರನ್ನು ಪರೀಕ್ಷಿಸಿ ಹಾರ್ಟ್​ಅಟ್ಯಾಕ್ ಆಗುತ್ತಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಕುಟುಂಬಸ್ಥರು ಜಯದೇವ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಮಾರ್ಗಮಧ್ಯೆ ಮತ್ತೆ ಜೀವ ಹೋಗಿದೆ.

ಹೀಗಾಗಿ ಶಿವರಾಮು ಮೃತದೇಹವನ್ನು ಮತ್ತೆ ಹುಚ್ಚಯ್ಯನದೊಡ್ಡಿಗೆ ಸಂಬಂಧಿಕರು ತಂದಿದ್ದು, ಮತ್ತೆ ಜೀವಬರಬಹುದೆಂದು ಮನೆ ಬಳಿ ಶವವಿಟ್ಟು ಸಂಬಂಧಿಕರು ಕಾಯುತ್ತಿದ್ದಾರೆ. ಮತ್ತೊಂದೆಡೆ ಗ್ರಾಮಸ್ಥರು ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.