ಮೂಲಸೌಕರ್ಯ ಕೊರತೆ: ರೊಚ್ಚಿಗೆದ್ದ ಆದಿವಾಸಿಗಳಿಂದ ಚುನಾವಣೆ ಬಹಿಷ್ಕಾರದ ಬೆದರಿಕೆ!
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದಲ್ಲಿ ನೆಲೆಸಿರುವ ಸೋಲಿಗ ಆದಿವಾಸಿಗಳು ರಸ್ತೆ, ವಿದ್ಯುತ್ ಪೂರೈಕೆ, ಕುಡಿಯುವ ನೀರಿನಂತಹ ಮೂಲ ಸೌಕರ್ಯಗಳ ಒದಗಿಸದ ಹಿನ್ನೆಲೆಯಲ್ಲಿ ಬೇಸತ್ತು ಹೋಗಿದ್ದು, ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಮೈಸೂರು: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದಲ್ಲಿ ನೆಲೆಸಿರುವ ಸೋಲಿಗ ಆದಿವಾಸಿಗಳು ರಸ್ತೆ, ವಿದ್ಯುತ್ ಪೂರೈಕೆ, ಕುಡಿಯುವ ನೀರಿನಂತಹ ಮೂಲ ಸೌಕರ್ಯಗಳ ಒದಗಿಸದ ಹಿನ್ನೆಲೆಯಲ್ಲಿ ಬೇಸತ್ತು ಹೋಗಿದ್ದು, ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
ಹಾಡಿಯಲ್ಲಿ ಟೆಂಟ್ ಹಾಕಿಕೊಂಡು ಧರಣಿ ನಡೆಸುತ್ತಿರುವ ಆದಿವಾಸಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
60 ಕುಟುಂಬಗಳು ಧರಣಿ ನಡೆಸಿದ್ದು, ಧರಣಿಯಲ್ಲಿ 650ಕ್ಕೂ ಹೆಚ್ಚು ಮಂದಿ ಭಾಗಿವಹಿಸಿದ್ದರು. ಪುರಾಣಿ ಪೋಡು, ಹೊಸಪೋಡು, ಮುಡಿಗಡಗದ್ದೆ ಪೋಡು, ಯರಕನಗದ್ದೆ ಕಾಲೋನಿ, ಬಂಗಲೆ ಪೋಡು, ಕಲ್ಯಾಣ್ ಪೋಡು, ಕನ್ನೇರಿ ಕಾಲೋನಿ, ಕೆರೆಡ್ಮಾಬ ಪೋಡು, ಕೊಂಬೆಗಡ್ಡಪೋಡು, ನೆಲ್ಲಿಕೆರೆ ಸೇರಿದಂತೆ ಎಲ್ಲಾ ಒಂಬತ್ತು ಬುಡಕಟ್ಟು ಧರಣಿಯಲ್ಲಿ ಪಾಲ್ಗೊಂಡಿದ್ದರು. ಈ ಧರಣಿಗೆ ಇತರೆ ಕುಗ್ರಾಮಗಳ ಕೂಡ ಬೆಂಬಲ ವ್ಯಕ್ತಪಡಿಸಿ, ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿವೆ.
ಗ್ರಾಮದಲ್ಲಿ ಕುಡಿಯುವ ನೀರು, ರಸ್ತೆ ಹಾಗೂ ವಿದ್ಯುತ್ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ ವಿಫಲವಾಗಿದೆ. ಮುಖ್ಯ ರಸ್ತೆಗೆ ತಲುಪಲು ಕಲ್ಲು ದಾರಿಯನ್ನು ಆಶ್ರಯಿಸಬೇಕು. ಕಾಡು ಪ್ರಾಣಿಗಳ ಭಯದಲ್ಲಿ ಸಂಚರಿಸಬೇಕು. ರಾತ್ರಿ ವಿದ್ಯುತ್ ಸಮಸ್ಯೆಯಿಂದ ನಿವಾಸಿಗಳು ತೊಂದರೆಯಾಗುತ್ತಿದೆ. ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾದರೆ, ಸ್ಟ್ರೆಚರ್ಗಳ ಮೂಲಕ ಮನೆಯಿಂದ ರಸ್ತೆವರೆಗೂ ನಡೆದು ಸಾಗಬೇಕು ಎಂದು ಗ್ರಾಮಸ್ಥರು ದೂರಿದ್ದಾರೆ.
ನಮ್ಮ ಮಕ್ಕಳು ಎಷ್ಟು ದಿನ ಕತ್ತಲೆಯಲ್ಲಿ ಬದುಕಬೇಕು? ಕಾಡಿನ ಹಾದಿಯಲ್ಲಿ ನಡೆಯಬೇಕು ಎಂದು ಆದಿವಾಸಿ ಮಾದೇಗೌಡ ಪ್ರಶ್ನಿಸಿದ್ದಾರೆ.
ಇದು ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿದೆ. ಇಲ್ಲಿನ ಮಕ್ಕಳು ಶಾಲೆಗೆ ಹೋಗಲು ಅರಣ್ಯದಲ್ಲಿ 5 ಕಿ.ಮೀ ನಡೆದು ಸಾಗಬೇಕು. ಚುನಾಯಿತ ಪ್ರತಿನಿಧಿಗಳು ಸೋಲಿಗ ಬುಡಕಟ್ಟುಗಳನ್ನು ಮುಖ್ಯವಾಹಿನಿಗೆ ತರುವ ಇಚ್ಛಾಶಕ್ತಿಯನ್ನು ಪ್ರದರ್ಶಿಸಿಲ್ಲ ಎಂದು ತಿಳಿಸಿದ್ದಾರೆ.
ಆದಿವಾಸಿಗಳು ಜೇನು ಸಾಕಾಣಿಕೆ ಮತ್ತು ಸಣ್ಣ ಅರಣ್ಯ ಉತ್ಪನ್ನಗಳ ಸಂಗ್ರಹದಲ್ಲಿ ತೊಡಗಿದ್ದಾರೆ. ಆದರೆ, ಬರಗಾಲ ಅವರ ಜೀವನೋಪಾಯಕ್ಕೆ ಹೊಡೆತ ನೀಡಿದೆ ಬುಡಕಟ್ಟು ಜನಾಂಗದವರಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುತ್ತಿಲ್ಲ, ಇದರಿಂದ ಅವರು ಜೀವನೋಪಾಯಕ್ಕಾಗಿ ಪಟ್ಟಣಗಳಿಗೆ ವಲಸೆ ಹೋಗುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದ್ದಾರೆ.
ಆದಿವಾಸಿ ಮಹಿಳೆ ಲಕ್ಷ್ಮಿ ಮಾತನಾಡಿ, 1ರಿಂದ 5ನೇ ತರಗತಿ ನಡೆಸುತ್ತಿರುವ ಆಶ್ರಮ ಶಾಲೆಯಲ್ಲಿ ಪ್ರೌಢಶಾಲೆ ಆರಂಭಿಸಲು ಸರಕಾರ ಮುಂದಾಗಬೇಕು. ರಸ್ತೆ, ವಾಹನ ಸೌಕರ್ಯ ಇಲ್ಲದಿದ್ದರೆ ಮಕ್ಕಳು ವಿದ್ಯಾಭ್ಯಾಸ ಉತ್ತಮ ರೀತಿಯಲ್ಲಿ ಸಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಧರಣಿ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಸಹಾಯಕ ಕಮಿಷನರ್ ಶಿವಮೂರ್ತಿ ಮತ್ತು ಇತರ ಅಧಿಕಾರಿಗಳು ಆದಿವಾಸಿಗಳ ಮನವೊಲಿಸುವ ಪ್ರಯತ್ನ ಮಾಡಿದರು. 45 ದಿನಗಳಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಶಾಲೆಯನ್ನು ಮೇಲ್ದರ್ಜೆಗೇರಿಸಲು ಮತ್ತು ವಿದ್ಯುತ್ ಸಂಪರ್ಕ ನೀಡಲು ಜಿಲ್ಲಾಡಳಿತ ಮುಕ್ತವಾಗಿದೆ ಎಂದು ಹೇಳಿದರು. ಇದಕ್ಕೆ ಒಪ್ಪಿದ ಸಮುದಾಯದ ಮುಖಂಡರು ಧರಣಿಯನ್ನು ಹಿಂಪಡೆದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



