ಚಿನ್ನಸ್ವಾಮಿ ಸ್ಟೇಡಿಯಂ ಸ್ಟಾಂಡ್ಗಳಿಗೆ ಮೂವರು ಕ್ರಿಕೆಟ್ ದಿಗ್ಗಜರ ಹೆಸರು ಇಡುವಂತೆ ಸಿಎಂ ಮನವಿ
ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಸ್ಟಾಂಡ್ಗಳಿಗೆ ರಾಜ್ಯದ ದಿಗ್ಗಜ ಕ್ರಿಕೆಟಿಗರಾದ ಇಎಎಸ್ ಪ್ರಸನ್ನ, ಜಿ.ಆರ್.ವಿಶ್ವನಾಥ್ ಮತ್ತು ಬಿ.ಎಸ್.ಚಂದ್ರಶೇಖರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಸ್ಟಾಂಡ್ಗಳಿಗೆ ರಾಜ್ಯದ ದಿಗ್ಗಜ ಕ್ರಿಕೆಟಿಗರಾದ ಇಎಎಸ್ ಪ್ರಸನ್ನ, ಜಿ.ಆರ್.ವಿಶ್ವನಾಥ್ ಮತ್ತು ಬಿ.ಎಸ್.ಚಂದ್ರಶೇಖರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಸೋಮವಾರ ಪತ್ರ ಬರೆದಿರುವ ಅವರು, ಈ ವಿಷಯದ ಕುರಿತು ಲೇಖಕ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ ಅವರು ಮಾರ್ಚ್ 29ರಂದು ತಮಗೆ ಬರೆದಿದ್ದ ಪತ್ರದ ಕುರಿತು ಉಲ್ಲೇಖಿಸಿದ್ದಾರೆ.
ರಾಮಚಂದ್ರ ಗುಹಾ ಅವರು ಮಾಡಿರುವ ಮನವಿಯಲ್ಲಿ ಶ್ರೇಷ್ಠ ಅಂಶಗಳಿವೆ. ಜಿ.ಆರ್. ವಿಶ್ವನಾಥ್, ಇ.ಎ.ಎಸ್. ಪ್ರಸನ್ನ ಹಾಗೂ ಬಿ.ಎಸ್. ಚಂದ್ರಶೇಖರ್ ಅವರ ಹೆಸರುಗಳನ್ನು ಸ್ಟ್ಯಾಂಡ್‌ಗಳಿಗೆ ನಾಮಕರಣ ಮಾಡಬೇಕೆಂದು ಮನವಿ ಮಾಡುತ್ತೇನೆ. ಇದರಿಂದ ಮುಂದಿನ ಪೀಳಿಗೆಯ ಆಟಗಾರರಿಗೆ ಪ್ರೇರಣೆ ಲಭಿಸುತ್ತದೆ’ ಎಂದು ಸಿದ್ಧರಾಮಯ್ಯ ಉಲ್ಲೇಖಿಸಿದ್ದಾರೆ.
1974ರಲ್ಲಿ ಕರ್ನಾಟಕ ತಂಡವು ಮೊದಲ ಬಾರಿಗೆ ರಣಜಿ ಟ್ರೋಫಿ ಜಯಿಸಿತ್ತು. ಸತತ 15 ಬಾರಿ ರಣಜಿ ಚಾಂಪಿಯನ್ ಆಗಿದ್ದ ಮುಂಬೈ ತಂಡದ ಪಾರಮ್ಯಕ್ಕೆ ಕರ್ನಾಟಕ ತಡೆಯೊಡ್ಡಿದ್ದು ಐತಿಹಾಸಿಕ ಸಾಧನೆ. ಆ ವಿಜಯಕ್ಕೆ ಈಗ 50 ವರ್ಷಗಳು ತುಂಬಿರುವ ಸಂಭ್ರಮ. ಶ್ರೇಷ್ಠ ಬ್ಯಾಟರ್ ವಿಶ್ವನಾಥ್, ಸ್ಪಿನ್ ಅವಳಿಗಳಾದ ಪ್ರಸನ್ನ ಮತ್ತು ಚಂದ್ರಶೇಖರ್ ರಾಜ್ಯ ಮತ್ತು ದೇಶದ ಕ್ರಿಕೆಟ್‌ಗೆ ನೀಡಿರುವ ಕೊಡುಗೆ ಅಮೋಘವಾದದ್ದು. ಅವರ ಹೆಸರುಗಳನ್ನು ಸ್ಟ್ಯಾಂಡ್‌ಗಳಿಗೆ ಇಡಲು ಕ್ರಮ ಕೈಗೊಳ್ಳಬೇಕು’ ಎಂದು ಗುಹಾ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ವಿವರಿಸಿದ್ದರು.
ಈಚೆಗೆ ಕೆಎಸ್‌ಎಲ್‌ಟಿಎನಲ್ಲಿ ನಡೆದಿದ್ದ 1974ರ ರಣಜಿ ಟ್ರೋಫಿ ವಿಜೇತ ತಂಡದ ಆಟಗಾರರನ್ನು ಸನ್ಮಾನಿಸುವ ಸಮಾರಂಭದಲ್ಲಿ ಭಾರತ ತಂಡದ ಮಾಜಿ ನಾಯಕ ಸುನಿಲ್ ಗಾವಸ್ಕರ್ ಅವರೂ ತಮ್ಮ ವಿಡಿಯೊ ಸಂದೇಶದಲ್ಲಿ ಇದೇ ಮಾತನ್ನು ಹೇಳಿದ್ದರು.
ನನ್ನ ಪ್ರಕಾರ ಗುಹಾ ಬರೆದ ಪತ್ರದಲ್ಲಿ ಬಹಳಷ್ಟು ಸತ್ಯಾಂಶ ಇದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನ ಸ್ಟಾಂಡ್ಗಳಿಗೆ ಕರ್ನಾಟಕದ ಕ್ರಿಕೆಟ್ ಲೆಂಜೆಂಡ್ಗಳಾದ ಇಎಎಸ್ ಪ್ರಸನ್ನ, ಜಿ.ಆರ್.ವಿಶ್ವನಾಥ್ ಮತ್ತು ಬಿ.ಎಸ್.ಚಂದ್ರಶೇಖರ್ ಹೆಸರನ್ನು ನಾಮಕರಣ ಮಾಡುವಂತೆ ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ. ಇದು ಮುಂಬರುವ ಕ್ರಿಕೆಟಿಗರಿಗೆ ಉತ್ತೇಜನ ನೀಡಲಿದೆ ಎಂದು ಸಿಎಂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



