ಬೆಂಗಳೂರು: ಹೋಟೆಲ್ನ 19ನೇ ಮಹಡಿಯಿಂದ ಜಿಗಿದು ತಮಿಳುನಾಡು ಮೂಲದ ವ್ಯಕ್ತಿ ಸಾವು
ತಮಿಳುನಾಡಿನ ಸೇಲಂ ಮೂಲದ 27 ವರ್ಷದ ಯುವಕ ಸೋಮವಾರ ಮಧ್ಯಾಹ್ನ 2.30 ರ ಸುಮಾರಿಗೆ ರೇಸ್ ಕೋರ್ಸ್ ರಸ್ತೆಯ ಮಾಧವ ನಗರದ ರಿನೈಸಾನ್ಸ್ ಹೋಟೆಲ್ನ 19ನೇ ಮಹಡಿಯಿಂದ ಜಿಗಿದು ನಿಗೂಢವಾಗಿ ಸಾವಿಗೀಡಾಗಿದ್ದಾನೆ.

ಬೆಂಗಳೂರು: ತಮಿಳುನಾಡಿನ ಸೇಲಂ ಮೂಲದ 27 ವರ್ಷದ ಯುವಕ ಸೋಮವಾರ ಮಧ್ಯಾಹ್ನ 2.30 ರ ಸುಮಾರಿಗೆ ರೇಸ್ ಕೋರ್ಸ್ ರಸ್ತೆಯ ಮಾಧವ ನಗರದ ರಿನೈಸಾನ್ಸ್ ಹೋಟೆಲ್ನ 19ನೇ ಮಹಡಿಯಿಂದ ಜಿಗಿದು ನಿಗೂಢವಾಗಿ ಸಾವಿಗೀಡಾಗಿದ್ದಾನೆ.
ಸಂತ್ರಸ್ತನನ್ನು ಶರಣ್ ಕುಮಾರನ್ ಎಂದು ಗುರುತಿಸಲಾಗಿದೆ. ಹೋಟೆಲ್ನ 19ನೇ ಮಹಡಿಯಲ್ಲಿರುವ ಬಾಲ್ಕನಿಯಿಂದ ಜಿಗಿದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆತ ಶನಿವಾರ ಹೋಟೆಲ್ಗೆ ಬಂದಿದ್ದ. ಸೋಮವಾರದವರೆಗೆ ಆತ ತನ್ನ ವಾಸ್ತವ್ಯವನ್ನು ವಿಸ್ತರಿಸಿದ್ದನು.
ಆತ ಹೋಟೆಲ್ಗೆ ಆಗ್ಗಾಗ್ಗೆ ಬರುತ್ತಿದ್ದರು ಮತ್ತು ಈ ಹಿಂದೆಯು ಕೆಲವು ಬಾರಿ ತಂಗಿದ್ದರು ಎಂದು ಹೇಳಲಾಗಿದೆ. ಚೆಕ್-ಇನ್ ಸಮಯದಲ್ಲಿ, ಆತ ವ್ಯವಹಾರದ ನಿಮಿತ್ತ ಬೆಂಗಳೂರಿನಲ್ಲಿರುವುದಾಗಿ ರಿಸಪ್ಷನ್ಗೆ ತಿಳಿಸಿದ್ದರು.
ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಡಿಸಿಪಿ (ಕೇಂದ್ರ) ಎಚ್ಟಿ ಶೇಖರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಘಟನೆ ನಡೆಯುವ ಕೆಲವು ನಿಮಿಷಗಳ ಮೊದಲು ಆತ 19ನೇ ಮಹಡಿಯ ಬಾಲ್ಕನಿಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ಇದನ್ನು ಗಮನಿಸಿದ ಹೋಟೆಲ್ ಅತಿಥಿಗಳು, ಭದ್ರತಾ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ಸೆಕ್ಯುರಿಟಿ ಆತನ ಬಳಿ ಬರುವಷ್ಟರಲ್ಲಿ ಆತ ಜಿಗಿದಿದ್ದಾನೆ. ಕುಮಾರನ್ ಒಬ್ಬರೇ ಹೋಟೆಲ್ಗೆ ಬಂದಿದ್ದರು ಎನ್ನಲಾಗಿದೆ.
ಘಟನೆ ನಂತರ, ಪೊಲೀಸರು ಅವರ ಕೊಠಡಿಯನ್ನು ಪರಿಶೀಲಿಸಿದಾಗ, ಅವರ ಆಧಾರ್ ಕಾರ್ಡ್ ಸಿಕ್ಕಿದೆ. ಸೇಲಂ ಜಿಲ್ಲಾ ಪೊಲೀಸರ ಮೂಲಕ ಅವರ ಕುಟುಂಬವನ್ನು ಸಂಪರ್ಕಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿರುವ ಹೈಗ್ರೌಂಡ್ಸ್ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ತನಿಖೆಗಳು ನಡೆಯುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




