ರಾಜ್ಯ

ಕೋಲಾರ: ಕ್ವಾರಿಯಲ್ಲಿ ಮುಳುಗುತ್ತಿದ್ದ ತಮ್ಮನನ್ನು ರಕ್ಷಿಸಲು ಹೋಗಿ ಅಣ್ಣನೂ ಸಾವು

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿಯ ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಕೋಲಾರ: ಕ್ವಾರಿಯಲ್ಲಿ ಮುಳುಗುತ್ತಿದ್ದ ತಮ್ಮನನ್ನು ರಕ್ಷಿಸಲು ಹೋಗಿ ಅಣ್ಣನೂ ಸಾವು
ಇಬ್ಬರು ಸಹೋದರರು
Published On :

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿಯ ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಮೃತ ಸಹೋದರರನ್ನು ಪವನ್ ​ಕುಮಾರ್(18)​ ಮತ್ತು ಮಧು ಕುಮಾರ್​()14 ಎಂದು ಗುರುತಿಸಲಾಗಿದೆ. ಬೇಸಿಗೆ ಬಿಸಿ ತಾಳಲಾರದೆ ಯುವಕರ ಜತೆ ಈಜಲು ಹೋಗಿದ್ದ ಈ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.

ಮುಳುಗುತ್ತಿದ್ದ ತನ್ನ ತಮ್ಮ ಮಧು ಕುಮಾರ್ ನನ್ನು ರಕ್ಷಿಸಲು ಹೋಗಿ ಅಣ್ಣ ಪವನ್ ಕುಮಾರ್ ಸಹ ನೀರು ಪಾಲಾಗಿದ್ದಾನೆ.

ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.