ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ; ವಿಜಯಪುರದಲ್ಲಿ ಸಿಡಿಲು ಬಡಿದು 16 ವರ್ಷದ ಬಾಲಕ ಸಾವು
ಬಿಸಿಲಿನಿಂದ ತತ್ತರಿಸಿದ್ದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ.

ವಿಜಯಪುರ: ಬಿಸಿಲಿನಿಂದ ತತ್ತರಿಸಿದ್ದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಾವಿನಹಳ್ಳಿಯಲ್ಲಿ ಸಿಡಿಲು ಬಡಿದು ಬಾಲಕನೊಬ್ಬ ಸಾವನ್ನಪ್ಪಿದ್ದಾನೆ.
ಮೃತ ಬಾಲಕನನ್ನು ಬೀರಪ್ಪ ನಿಂಗಪ್ಪ ಅವರಾದಿ(16) ಎಂದು ಗುರುತಿಸಲಾಗಿದೆ. ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇಂದು ವಿಜಯಪುರ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.
ಕಳೆದೊಂದು ವಾರದಿಂದ ನಿಗಿನಿಗಿ ಕೆಂಡವಾಗಿದ್ದ ಕಲಬುರಗಿರಯಲ್ಲಿ ಇಂದು ಮಳೆರಾಯ ತಂಪೆರೆದಿದ್ದಾನೆ. ಜಿಲ್ಲೆಯ ಅಫಜಲಪುರ ತಾಲೂಕಿನ ಹಲವೆಡೆ ಗುಡುಗು, ಮಿಂಚು ಸಹಿತ ಧಾರಕಾರ ಮಳೆಯಾಗಿದೆ. ವರ್ಷದ ಮೊದಲ ಮಳೆಗೆ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಲಬುರಗಿ ನಗರದಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಹಾಗೂ ಇಳಕಲ್, ಬೆಳಗಾವಿ ಜಿಲ್ಲೆಯ ಬೆಳಗಾವಿ ನಗರ ಹಾಗೂ ಸುತ್ತಲಿನ ಪ್ರಾಂತ್ಯಗಳು, ಚಿಕ್ಕಮಗಳೂರು ಜಿಲ್ಲೆಯ ಕಳಸ, ಶೃಂಗೇರಿ ಹಾಗೂ ಬಾಳೆಹೊನ್ನೂರು ವಲಯಗಳಲ್ಲಿ ಜೋರಾಗಿ ಮಳೆ ಸುರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



