ರಾಜ್ಯ

ಬೆಂಗಳೂರು: ಜಯನಗರದ ಕಾರೊಂದರಲ್ಲಿ ಕೋಟಿ ಕೋಟಿ ಹಣ ಪತ್ತೆ, ಎರಡು ಐಷಾರಾಮಿ ಕಾರು ವಶ!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಚೆಕ್‌ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ನು ಬೆಂಗಳೂರಿನ ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಜಯನಗರದ ಕಾರೊಂದರಲ್ಲಿ ಕೋಟಿ ಕೋಟಿ ಹಣ ಪತ್ತೆ, ಎರಡು ಐಷಾರಾಮಿ ಕಾರು ವಶ!
ಐಷಾರಾಮಿ ಕಾರುಗಳ ವಶ
Published On :

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಚೆಕ್‌ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ನು ಬೆಂಗಳೂರಿನ ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಜಯನಗರದಲ್ಲಿ ಬೆಂಜ್‌ ಕಾರಿನಲ್ಲಿ ಕೋಟಿ ಕೋಟಿ ಹಣವನ್ನು ಸಾಗಿಸಲಾಗುತ್ತಿದೆ ಎಂದು ಅಪರಿಚಿತರು ಕರೆ ಮಾಡಿದ ಹಿನ್ನೆಲೆಯಲ್ಲಿ ಅಖಾಡಕ್ಕಿಳಿದ ಅಧಿಕಾರಿಗಳು, ಸ್ಕೂಟಿಯಲ್ಲಿದ್ದ ಕೋಟಿ ಕೋಟಿ ಹಣವನ್ನು ಕಾರಿಗೆ ಶಿಫ್ಟ್‌ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು ಕೂಡಲೇ ಎರಡು ಕಾರುಗಳನ್ನು ನಿಲ್ಲಿಸಿ ಪರಿಶೀಲನೆ ಮಾಡುವಾಗ ಕೋಟಿ ಕೋಟಿ ಹಣ ಪತ್ತೆಯಾಗಿದೆ.

ಯಾರಿಗೂ ಅನುಮಾನ ಬಾರದಿರಲಿ ಎಂದು ಕಿಡಿಗೇಡಿಗಳು ಸುಮಾರು 1.40 ಕೋಟಿ ರೂ. ಹಣವನ್ನು ಗೋಣಿಚೀಲದಲ್ಲಿ ತುಂಬಿದ್ದರು. ಅಧಿಕಾರಿಗಳು ತಪಾಸಣೆಗೆ ಮುಂದಾದ ಮಾವಿನ ಹಣ್ಣಿನ ಬ್ಯಾಗ್‌ ಎಂದು ಸಬುಬೂ ಹೇಳಿ ಕಾರನ್ನು ಲಾಕ್‌ ಮಾಡಿದ್ದಾರೆ. ಅನುಮಾನಗೊಂಡ ಚುನಾಣಾಧಿಕಾರಿಗಳು ಕಾರಿನ ಗ್ಲಾಸ್‌ ಒಡೆದು ಪರಿಶೀಲನೆ ನಡೆಸಿದಾಗ ನಗದು ಪತ್ತೆಯಾಗಿದೆ. ಕಂತೆ ಕಂತೆ ಹಣ ಸಿಗುತ್ತಿದ್ದಂತೆ ಕಾರಿನಲ್ಲಿದ್ದ ಐವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ವಶಕ್ಕೆ ಹಣವನ್ನು ಜಯನಗರ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.