ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರಾಗಿ ಡಾ. ಶ್ಯಾಮ್ ಭಟ್ ನೇಮಕ
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ (ಎಸ್‌ಎಚ್‌ಆರ್‌ಸಿ) ಹಂಗಾಮಿ ಅಧ್ಯಕ್ಷರನ್ನಾಗಿ ಆಡಳಿತಾತ್ಮಕ ಸದಸ್ಯರಾಗಿರುವ ನಿವೃತ್ತ ಐಎಎಸ್ ಅಧಿಕಾರಿ ಡಾ. ಟಿ ಶ್ಯಾಮ್ ಭಟ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ (ಎಸ್‌ಎಚ್‌ಆರ್‌ಸಿ) ಹಂಗಾಮಿ ಅಧ್ಯಕ್ಷರನ್ನಾಗಿ ಆಡಳಿತಾತ್ಮಕ ಸದಸ್ಯರಾಗಿರುವ ನಿವೃತ್ತ ಐಎಎಸ್ ಅಧಿಕಾರಿ ಡಾ. ಟಿ ಶ್ಯಾಮ್ ಭಟ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಮಾನವ ಹಕ್ಕುಗಳ ರಕ್ಷಣಾ ಕಾಯಿದೆ ಸೆಕ್ಷನ್ 25ರ ಉಪ ಸೆಕ್ಷನ್ (1)ರ ಅಡಿ ರಾಜ್ಯಪಾಲರು ಡಾ. ಟಿ ಶ್ಯಾಮ್ ಭಟ್ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ನೂತನ ಅಧ್ಯಕ್ಷರನ್ನು ನೇಮಕ ಮಾಡುವವರೆಗೆ ಅಥವಾ ಮುಂದಿನ ಆದೇಶದವರೆಗೆ ಭಟ್ ಅಧ್ಯಕ್ಷ ಹುದ್ದೆಯಲ್ಲಿರಲಿದ್ದಾರೆ ಎಂದು ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿಎಸ್ ಸಂಗ್ರೇಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಎಸ್‌ಎಚ್‌ಆರ್‌ಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಲ್ ನಾರಾಯಣಸ್ವಾಮಿ ಅವರನ್ನು ಲೋಕಪಾಲದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಅವರು ಈ ಹುದ್ದೆ ತೊರೆದಿದ್ದರು. ಇದರಿಂದ ಎಸ್‌ಎಚ್‌ಆರ್‌ಸಿ ಅಧ್ಯಕ್ಷ ಹುದ್ದೆ ಖಾಲಿಯಿತ್ತು. ಇದಕ್ಕೆ ಈಗ ಶ್ಯಾಮ್ ಭಟ್ ನೇಮಕ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



