ರಾಜ್ಯ

ಮಂಡ್ಯದಲ್ಲಿ ಏಪ್ರಿಲ್ 17 ರಂದು ರಾಹುಲ್ ಗಾಂಧಿ ಚುನಾವಣಾ ಪ್ರಚಾರ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬುಧವಾರ (ಏಪ್ರಿಲ್‌ 17) ಮಂಡ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

ಮಂಡ್ಯದಲ್ಲಿ ಏಪ್ರಿಲ್ 17 ರಂದು ರಾಹುಲ್ ಗಾಂಧಿ ಚುನಾವಣಾ ಪ್ರಚಾರ
ರಾಹುಲ್ ಗಾಂಧಿ
Published On :

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬುಧವಾರ (ಏಪ್ರಿಲ್‌ 17) ಮಂಡ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಕೋಲಾರಕ್ಕೂ ಬರಲಿದ್ದಾರೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್‌ ಸೊರಕೆ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿಯವರ ವ್ಯಕ್ತಿತ್ವವನ್ನು ತೇಜೋವಧೆ ಮಾಡುವುದನ್ನು ಬಿಜೆಪಿ ಕಾಯಂ ಕಾರ್ಯಸೂಚಿಯನ್ನಾಗಿ ಮಾಡಿಕೊಂಡಿದೆ. ರಾಹುಲ್‌ ಗಾಂಧಿಯವರ ವ್ಯಕ್ತಿತ್ವ ಏನು ಎನ್ನುವುದು ದೇಶದ ಜನರಿಗೆ ಚೆನ್ನಾಗಿ ಗೊತ್ತಿದೆ ಎಂದರು.

ಅಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸುವ ರಾಹುಲ್‌ ಗಾಂಧಿ ರಾಜ್ಯ ನಾಯಕರೊಂದಿಗೆ ಮೊದಲು ಮಂಡ್ಯ ಜಿಲ್ಲೆಗೆ ತೆರಳಿ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಪರ ಕ್ಷೇತ್ರದ ವಿವಿಧೆಡೆ ಪ್ರಚಾರ ನಡೆಸಲಿದ್ದಾರೆ. ನಂತರ ಸಂಜೆ ಕೋಲಾರಕ್ಕೆ ತೆರಳಿ ಪಕ್ಷದ ಅಭ್ಯರ್ಥಿ ಕೆ.ವಿ.ಗೌತಮ್‌ ಪರವಾಗಿ ಕ್ಷೇತ್ರದ ಹಲವೆಡೆ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸುವ ಯೋಜನೆಯೂ ಇದ್ದು, ಅದು ಇನ್ನೂ ಖಚಿತಗೊಂಡಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕಾಂಗ್ರೆಸ್ ಪ್ರಚಾರ ಮಾಡುತ್ತಿರುವ ಬಗ್ಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅಣಕವಾಡಿದ್ದಾರೆ. ರಾಹುಲ್ ಶೀಘ್ರದಲ್ಲೇ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಾರೆ, ಆದರೆ ಈಗ ನಿಗದಿ ಪಡಿಸಿರುವ ದಿನಾಂಕವು ತಾತ್ಕಾಲಿಕವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.