ಕಲಬುರಗಿ: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ
ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿಯ ಮೆರವಣಿಗೆ ವೇಳೆಯಲ್ಲಿ ಯುವಕನಿಗೆ ಚಾಕುವಿನಿಂದ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿಯ ಮೆರವಣಿಗೆ ವೇಳೆಯಲ್ಲಿ ಯುವಕನಿಗೆ ಚಾಕುವಿನಿಂದ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಅಶೋಕನಗರದ ನಿವಾಸಿ ಆಕಾಶ್ ಅಂಜನೇಯ (26) ಹತ್ಯೆಗೀಡಾದ ಯುವಕ. ಆತನ ಸ್ನೇಹಿತ ನವೀನ್ ಎಂಬಾತ ಕೊಲೆ ಮಾಡಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾತ್ರಿ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ವೇಳೆ ರಾಷ್ಟ್ರಪತಿ ಚೌಕ್ ನಲ್ಲಿ ಆಕಾಶ್ ಡ್ಯಾನ್ಸ್ ಮಾಡುತ್ತಿದ್ದಾಗ ಹಿಂದುಗಡೆಯಿಂದ ಬಂದ ನವೀನ್, ಆತನ ಬೆನ್ನಿಗೆ ಚೂರಿ ಹಾಕಿ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದಿದ್ದ ಆಕಾಶ್ ನನ್ನು ಕೆಲವರು ಆಸ್ಪತ್ರೆಗೆ ಕರೆದೊಯ್ದರು ಬದುಕಿ ಉಳಿಯಲಿಲ್ಲ . ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


