ಬಾಗಲಕೋಟೆ: ಟಿಪ್ಪರ್ ಲಾರಿ ಪಲ್ಟಿಯಾಗಿ ಒಂದೇ ಕುಟುಂಬದ ಐವರ ದುರ್ಮರಣ
ಬಾಗಲಕೋಟೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಾಗಲಕೋಟೆ: ಬಾಗಲಕೋಟೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ಬಾದದಿನ್ನಿ ಗ್ರಾಮದ ಯಂಕಪ್ಪ ತೋಳಮಟ್ಟಿ, ಆತನ ಪತ್ನಿ ಯಲ್ಲವ್ವ, ಮಗ ಪುಂಡಲೀಕ, ಮಗಳು ನಾಗವ್ವ ಹಾಗೂ ಗಂಡ ಅಶೋಕ ಬಮ್ಮಣ್ಣವರ ಎಂದು ಗುರುತಿಸಲಾಗಿದೆ.
ಮೃತರು ಹೊಲದ ಕೆಲಸ ಮುಗಿಸಿ ಮನೆಗೆ ತೆರಳಲು ರಸ್ತೆಪಕ್ಕ ನಿಂತಿದ್ದಾಗ ಟೈರ್ ಬ್ಲಾಸ್ಟ್ ಆಗಿ ಟಿಪ್ಪರ್ ಲಾರಿ ಅವರ ಮೇಲೆ ಉರುಳಿ ಬಿದ್ದಿದ್ದು ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬೀಳಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



