ಪ್ರಹ್ಲಾದ ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ದಿಂಗಾಲೇಶ್ವರ ಶ್ರೀ ಮುಂದಾಗಬಾರದು: ಯಡಿಯೂರಪ್ಪ
ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜನತೆ ಪ್ರಹ್ಲಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕೈ ಹಾಕಬಾರದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿ: ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜನತೆ ಪ್ರಹ್ಲಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕೈ ಹಾಕಬಾರದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಧಾರವಾಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದಂತೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಮತ್ತೊಮ್ಮೆ ಮನವಿ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಬಾರದೆಂದು ಅವರನ್ನು ಕೋರುವೆ. ಮುಂದೆ ಏನು ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ ಎಂದರು.
ರಾಜ್ಯದಲ್ಲಿ ಬಿಜೆಪಿ, ಪ್ರಧಾನಿ ಮೋದಿ ಪರವಾದ ಅಲೆ ಇದೆ. ಈ ಕ್ಷೇತ್ರದಲ್ಲಿ ಜೋಶಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮನೆ ಮನೆಗೆ ಗೊತ್ತಿದೆ. ಅವರೊಬ್ಬ ಪ್ರಬುದ್ಧ ರಾಜಕಾರಣಿಯಾಗಿದ್ದಾರೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದರು.
ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಸ್ವಾಮೀಜಿ ಅವರಿಗೆ ಮತ್ತೊಮ್ಮೆ ವಿನಂತಿ ಮಾಡುತ್ತೇನೆ. ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ಈ ಕುರಿತು ಈಗಾಗಲೇ ಅವರೊಂದಿಗೆ ಮಾತನಾಡಿದ್ದೇನೆ. ಇನ್ನೊಮ್ಮೆ ಫೋನ್ ಕರೆ ಮೂಲಕ ಅವರನ್ನು ಮನವೊಲಿಸುವ ಕೆಲಸ ಮಾಡುವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



